ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 1: ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಸೆ. 8 ರಿಂದ 17ರವರೆಗೆ ನಗರದ ಇಂಡಿ ರಸ್ತೆಯಲ್ಲಿ ಇರುವ ಚಾಂದನಿ ಫಂಕ್ಷನ್ ಹಾಲ್‍ನಲ್ಲಿ ರಾಜ್ಯ ಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ ಹಮ್ಮಿಕೊಳ್ಳಲಾಗಿದೆ.
ಸೆ.8ರಂದು ಬೆಳಿಗ್ಗೆ 11 ಗಂಟೆಗೆ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳದ ಉದ್ಘಾಟನಾ ಸಮಾರಂಭ ಜರುಗಲಿದ್ದು, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಉದ್ಘಾಟನೆ ನೆರವೇರಿಸಲಿದ್ದಾರೆ.
ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪ ದರ್ಶನಾಪೂರ ಮಳಿಗೆ ಉದ್ಘಾಟನೆ ಹಾಗೂ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಬಸನಗೌಡ ತುರವಿಹಾಳ ಅವರು ಪ್ರಾತ್ಯಕ್ಷಿಕೆ ಉದ್ಘಾಟನೆ ಮಾಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆಯ ಸಚಿವ ಶಿವಾನಂದ ಪಾಟೀಲ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ರವಿಕುಮಾರ ಎನ್, ನವದೆಹಲಿಯ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ-2 ಹಾಗೂ ವಿಧಾನ ಪರಿಷತಿನ ಶಾಸಕ ಪ್ರಕಾಶ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್.ನಾಡಗೌಡ, ಸಂಸದರಾದ ರಮೇಶ ಜಿಗಜಿಣಗಿ, ಸುಧಾ ಮೂರ್ತಿ, ಶಾಸಕರಾದ ಯಶವಂತರಾಯಗೌಡ ಪಾಟೀಲ, ಹನಮಂತ ನಿರಾಣಿ, ಸುನೀಲಗೌಡ ಪಾಟೀಲ, ಪಿ.ಎಚ್. ಪೂಜಾರ, ವಿಠ್ಠಲ ಕಟಕಧೋಂಡ, ಭೀಮನಗೌಡ (ರಾಜುಗೌಡ) ಪಾಟೀಲ, ಅಶೋಕ ಮನಗೂಳಿ, ಕೇಶವ ಪ್ರಸಾದ ಎಸ್, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯಕ, ಧಾರವಾಡದ ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಮಹಾನಗರ ಪಾಲಿಕೆಯ ಮಹಾಪೌರ ಎಂ. ಎಸ್. ಕರಡಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕನಾನ್ ಮುಶ್ರೀಫ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಇಲಿಯಾಸ ಬೋರಾಮಣಿ, ಕೆ.ಕೆ.ಜಿ.ಎಸ್. ಅಧ್ಯಕ್ಷ ಬಿ.ಬಿ.ಪಾಟೀಲ (ಶೇಗುಣಸಿ) ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಸೆ.8ರಿಂದ ರಾಜ್ಯ ಮಟ್ಟದ ಖಾದಿ ಮತ್ತು ಗ್ರಾಮೋದ್ಯೊಗ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ
