ಕರ್ನಾಟಕ ರಾಜ್ಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಸದಸ್ಯ ಸುನೀಲ ಉಕ್ಕಲಿ ವಿವಿಧ ಇಲಾಖೆ‌ಗಳಿಗೆ ಭೇಟಿ, ಚರ್ಚೆ

ಸಪ್ತಸಾಗರ ವಾರ್ತೆ, ವಿಜಯಪುರ,ಡಿ.3: ಕರ್ನಾಟಕ ರಾಜ್ಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಸದಸ್ಯ ಸುನೀಲ ಉಕ್ಕಲಿ ಅವರು ಬುಧವಾರ ವಿವಿಧ ಇಲಾಖೆ‌ಯ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ವಿವಿಧ ಯೋಜನೆಗಳ ಕುರಿತು ಚರ್ಚೆ ನಡೆಸಿದರು.
ಜಿಲ್ಲಾಧಿಕಾರಿ ಡಾ.ಆನಂದ ಕೆ ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರೊಂದಿಗೆ ಜಿಲ್ಲೆಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ವಿವಿಧ ಯೋಜನೆಗಳ ಪ್ರಗತಿಯ ಕುರಿತು ಚರ್ಚಿಸಿ ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಂಡು,
ಯೋಜನೆಯ ಲಾಭ ಅರ್ಹರಿಗೆ ತಲುಪುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ
ನೀಡುವ ಹಿನ್ನೆಲೆಯಲ್ಲಿ ಚರ್ಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರನ್ನು ಅವರ ಕಚೇರಿಯಲ್ಲಿ ಭೇಟಿ ಮಾಡಿ, ದೌರ್ಜನ್ಯ ಪ್ರಕರಣಗಳ ಬಗ್ಗೆ ಚರ್ಚೆ ನಡೆಸಿ, ಮಾಹಿತಿ‌ ಪಡೆದುಕೊಂಡ ಅವರು,ಜಿಲ್ಲೆಯಲ್ಲಿ ದೌರ್ಜನ್ಯ ಪ್ರಕರಣಗಳು ಕುರಿತು ವಿಶೇಷ ಕಾಳಜಿ ವಹಿಸಿ, ದೌರ್ಜನ್ಯ ಪ್ರಜರಣಗಳಲ್ಲಿ ತ್ವರಿತ‌‌ ಕ್ರ‌ಮವಹಿಸಿತ್ತಿರುವ ಪೊಲೀಸ್ ಇಲಾಖೆಗೆ ಕಾರ್ಯವೈಖರಿ ಪ್ರಶಂಸಿದರು.
ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯ ವಾಸ್ತವ್ಯ ಸ್ವಚ್ಛತಾ ಅಭಿಯಾನ ಹಾಸ್ಟೆಲ್ ಮೆಂಟರ್ ಗಳ ನೇಮಕ ವಾರ್ಡನರ ವಿಶೇಷ ದಿನಚರಿಗಳಿಂದಾಗಿ ಉತ್ತಮವಾಗಿ ಸೇವೆ ನೀಡುತ್ತಿರುವ ಸಮಾಜ ಕಲ್ಯಾಣ ಇಲಾಖೆಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು
ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹೇಶ ಪೋತದಾರ ಅವರು ಸಮಾಜ‌ಕಲ್ಯಾಣ ಇಲಾಖೆಯ ಕಾರ್ಯ ವೈಖರಿ, ಕೈಗೊಂಡ ಕ್ರಮಗಳ ಕುರಿತಾಗಿ ವಿಸ್ತೃತವಾಗಿ ವಿವರಿಸಿದರು.
ಈ ಸಂದರ್ಭದಲ್ಲಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೊಲೀಸ್ ಉಪ ಅಧೀಕ್ಷಕ ಸಂದೀಪ್ ಸಿಂಗ್ ಮುರುಗೋಡ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಎಸ್.ಎಂ. ಪಾಟೀಲ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಬಿಜೆ ಇಂಡಿ, ಎಸ್ ಸಿಪಿ ಟಿಎಸ್‌ಪಿ ಅಧೀಕ್ಷಕ ಅರವಿಂದ ಲಂಬು ಹಾಗೂ ವಿವಿಧ ದಲಿತ ಪರ ಮುಖಂಡರು,ಸಮಾಜ ಕಲ್ಯಾಣ ಇಲಾಖೆ ಹಾಗೂ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.

Share this