
ಕರ್ನಾಟಕದಲ್ಲಿ ದ್ವಿಭಾಷಾ ನೀತಿ ಜಾರಿಗೆ ಆಗ್ರಹಿಸಿ ಕರವೇ ಪ್ರತಿಭಟನೆ
ಸಪ್ತಸಾಗರ ವಾರ್ತೆ,ವಿಜಯಪುರ, ಜು. 9 : ಕರ್ನಾಟಕದ ಶಿಕ್ಷಣ ವ್ಯವಸ್ಥೆಯಲ್ಲಿ ದ್ವಿಭಾಷಾ ನೀತಿಯನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು, ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಈ ಬಗ್ಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಕರವೇ ಜಿಲ್ಲಾಧ್ಯಕ್ಷ ಎಂ.ಸಿ.ಮುಲ್ಲಾ ಮಾತನಾಡಿ, ಕರ್ನಾಟಕ ರಾಜ್ಯದ ಪಠ್ಯಕ್ರಮದಲ್ಲಿ ಸಾಧಾರಣವಾಗಿ ಕನ್ನಡವನ್ನು ಪ್ರಥಮ ಭಾಷೆಯಾಗಿ ಕನ್ನಡವನ್ನು, ದ್ವಿತೀಯ ಭಾಷೆಯಾಗಿ ಇಂಗ್ಲಿಷನ್ನು ಮತ್ತು ತೃತೀಯ ಭಾಷೆಯಾಗಿ ಹಿಂದಿಯನ್ನು ಕಲಿಸಲಾಗುತ್ತಿದೆ. ರಾಜ್ಯ…