ಜಿಲ್ಲಾ ಮತದಾರರ ಸಹಾಯವಾಣಿ-1950 ಪ್ರಾರಂಭ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ.9:ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 ಪ್ರಗತಿಯಲ್ಲಿದ್ದು, ಸಾರ್ವಜನಿಕರ ಅನುಕೂಲಕ್ಕಾಗಿ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಮತದಾರರ ಸಹಾಯವಾಣಿ ಸಂಖ್ಯೆ-1950 ಪ್ರಾರಂಭಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳು ಹಾಗೂ ಅಪರ ಜಿಲ್ಲಾ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ(ಎಸ್ ಐಆರ್) ಕುರಿತು ಯಾವುದೇ ಮಾಹಿತಿ ಪಡೆಯಲು ಅಥವಾ ಈ ಕುರಿತು ಕುಂದುಕೊರತೆಗಳನ್ನು ದಾಖಲಿಸಲು ಸಾರ್ವಜನಿಕರು ಈ ಉಚಿತ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಬಹುದು. ಈ ಮೂಲಕ ಅಗತ್ಯ ಮಾಹಿತಿ ಮತ್ತು ಸಲಹೆಗಳನ್ನು ಪಡೆದುಕೊಳ್ಳಬಹುದಾಗಿದೆ.ಸಾರ್ವಜನಿಕರು…

Read More