371(ಜೆ) ಸೌಲಭ್ಯಕ್ಕಾಗಿ 16 ದಿನಗಳಿಂದ ಧರಣಿ : ವಿಜಯಪುರ ಜಿಲ್ಲೆ ಸೇರ್ಪಡೆಗೆ ಮೂವರು ಶಾಸಕರ ಬೆಂಬಲ
ಚಳಿಗಾಲದ ಅಧಿವೇಶನದಲ್ಲಿ ಧ್ವನಿ ಎತ್ತಲು ನಿರ್ಧಾರ; ಕೇಂದ್ರಕ್ಕೆ ಶಿಫಾರಸಿಗೆ ಒಗ್ಗಟ್ಟಿನ ಪ್ರಯತ್ನದ ಭರವಸೆ ಸಪ್ತಸಾಗರ ವಾರ್ತೆ, ಸಿಂದಗಿ, ಅ. 18:ಡಾ. ಡಿ.ಎಂ. ನಂಜುಂಡಪ್ಪ ವರದಿಯ ಶಿಫಾರಸಿನ ಆಧಾರದಲ್ಲಿ ವಿಜಯಪುರ ಜಿಲ್ಲೆಯನ್ನು ಸಂವಿಧಾನದ 371(ಜೆ) ಕಲಂ ವ್ಯಾಪ್ತಿಗೆ ಸೇರ್ಪಡೆಗೊಳಿಸಿ, ಈ ಭಾಗದ ಜನರಿಗೆ ವಿಶೇಷ ಸೌಲಭ್ಯ ಕಲ್ಪಿಸಬೇಕೆಂಬ ಬೇಡಿಕೆ ತೀವ್ರಗೊಂಡಿದೆ. ಈ ನಿಟ್ಟಿನಲ್ಲಿ ಬಸವೇಶ್ವರ ವೃತ್ತದ ಬಳಿ ಕಳೆದ 16 ದಿನಗಳಿಂದ ನಡೆಯುತ್ತಿರುವ ಧರಣಿ ಸತ್ಯಾಗ್ರಹಕ್ಕೆ ಇಂಡಿ, ಸಿಂದಗಿ ಹಾಗೂ ದೇವರಹಿಪ್ಪರಗಿ ಕ್ಷೇತ್ರಗಳ ಶಾಸಕರು ಭೇಟಿ ನೀಡಿ ಬೆಂಬಲ…


