ಆಮ್ ಆದ್ಮಿ ಜಿಲ್ಲಾಧ್ಯಕ್ಷ ಭೋಗೇಶ ಸೋಲಾಪೂರ ಸೇರಿ ಎಲ್ಲ ಹೋರಾಟಗಾರರ ಮೇಲಿನ ಪ್ರಕರಣ ಹಿಂಪಡೆದು ಬಿಡುಗಡೆಗೊಳಿಸಿ : ಎಎಪಿ ರಾಜ್ಯ ಕಾರ್ಯಾಧ್ಯಕ್ಷ ಸೀತಾರಾಮ ಗುಂಡಪ್ಪ
ಸಪ್ತಸಾಗರ ವಾರ್ತೆ, ವಿಜಯಪುರ, ಜ. 5 : ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನಾ ಹೋರಾಟ ಸಮಿತಿ ಸದಸ್ಯ, ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಭೋಗೇಶ ಸೋಲಾಪುರ ಸೇರಿದಂತೆ ಆರು ಜನ ಹೋರಾಟಗಾರರನ್ನು ಕೂಡಲೇ ಬಿಡುಗಡೆಗೊಳಿಸಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಸೀತಾರಾಮ ಗುಂಡಪ್ಪ ಅವರು ಆಗ್ರಹಿಸಿದರು.ನಗರದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ವಿಜಯಪುರ ನಗರದ ಡಾ. ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ 106 ದಿನಗಳ ಕಾಲ ಶಾಂತಿಯುತ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ನಡೆಸಿ…


