ಮಹಿಳೆಯರಿಗೆ ಶೂನ್ಯ ಸ್ಥಾನ, ವಿಜಯಪುರಕ್ಕೂ ನಿರಾಸೆ: ಸಚಿವ ಸಂಪುಟ ವಿಸ್ತರಣೆ ವಿರುದ್ಧ ಆಪ್ ವಾಗ್ದಾಳಿ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 4: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಹಿಳೆಯರಿಗೆ ಒಂದೇ ಒಂದು ಸಚಿವ ಸ್ಥಾನವನ್ನೂ ನೀಡದಿರುವುದು, ಭ್ರಷ್ಟಾಚಾರದ ಆರೋಪ ಎದುರಿಸಿದ್ದ ನಾಯಕರಿಗೆ ಮತ್ತೆ ಅವಕಾಶ ಕಲ್ಪಿಸಿರುವುದು ಹಾಗೂ ವಿಜಯಪುರ ಜಿಲ್ಲೆಗೆ ಹೆಚ್ಚುವರಿ ಪ್ರಾತಿನಿಧ್ಯ ನೀಡದಿರುವುದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯವನ್ನು ಬಯಲಿಗೆಳೆದಿದೆ ಎಂದು ಆಮ್ ಆದ್ಮಿ ಪಕ್ಷದ ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್ ಆರೋಪಿಸಿದರು.ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳಾ ಸಬಲೀಕರಣದ ಬಗ್ಗೆ ವೇದಿಕೆಗಳಲ್ಲಿ ಮಾತನಾಡುವ ಕಾಂಗ್ರೆಸ್, ಅಧಿಕಾರ ಹಂಚಿಕೆಯ ಸಂದರ್ಭದಲ್ಲಿ ಮಹಿಳೆಯರನ್ನು ಸಂಪೂರ್ಣವಾಗಿ…

Read More

ರೈತ ವಿರೋಧಿ ಕ್ಯಾಬಿನೆಟ್ ನಿರ್ಧಾರ ಖಂಡಿಸಿ ಆಪ್ ಆಕ್ರೋಶ

ಪಂಜಾಬ್ ಮಾದರಿಯ ರೈತಪರ ಆಡಳಿತ ಜಾರಿಗೆ ಆಗ್ರಹ ಸಪ್ತಸಾಗರ ವಾರ್ತೆ,ವಿಜಯಪುರ, ಜು. 3: ರಾಜ್ಯ ಸರ್ಕಾರದ ಇತ್ತೀಚಿನ ಕ್ಯಾಬಿನೆಟ್ ನಿರ್ಧಾರ ರೈತರಿಗೆ ಅನ್ಯಾಯವಾಗಿದ್ದು, “ಬೆಳೆ ಬೆಳೆಯಬೇಡಿ, ಪರಿಹಾರ ಕೇಳಬೇಡಿ” ಎನ್ನುವ ಧೋರಣೆಯನ್ನು ಪ್ರತಿಬಿಂಬಿಸುತ್ತದೆ ಎಂದು ಆರೋಪಿಸಿ ಆಮ್ ಆದ್ಮಿ ಪಕ್ಷದ ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ ಸೋಲಾಪುರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮಳೆ ಕೊರತೆ, ಅತಿವೃಷ್ಟಿ, ಬೆಳೆಗಳಿಗೆ ಸಮರ್ಪಕ ಬೆಲೆ ಸಿಗದಿರುವುದು, ಉತ್ಪಾದನಾ ವೆಚ್ಚ ಹೆಚ್ಚಳ, ಸಾಲದ ಹೊರೆ ಸೇರಿದಂತೆ ಹಲವು ಸಮಸ್ಯೆಗಳಿಂದ ರೈತರು…

Read More

ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್ ಬಳಕೆ: ಸೋಲಾಪುರ ಸ್ವಾಗತ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 5: ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಬ್ಯಾಲೆಟ್ ಪೇಪರ್ ಗಳ ಮೂಲಕ ನಡೆಸುವ ಕರ್ನಾಟಕ ರಾಜ್ಯ ಸರ್ಕಾರದ ಕ್ರಮವನ್ನು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಬೋಗೇಶ ಸೋಲಾಪುರ ಸ್ವಾಗತಿಸಿದ್ದಾರೆ.ಇತ್ತೀಚೆಗೆ ಅನೇಕ ರಾಜ್ಯಗಳಲ್ಲಿ ನಡೆದ ಸಾರ್ವತ್ರಿಕ ಚುನಾವಣೆಗಳಲ್ಲಿ ಮತ ಕಳ್ಳತನ ಆಗಿದೆ ಎಂಬ ಸಾಕ್ಷ್ಯಸಮೇತದ ಇಂಡಿಯಾ ಒಕ್ಕೂಟದ ನಾಯಕರುಗಳ ಗುರುತರ ಆರೋಪಗಳಿಗೆ ಯಾವುದೇ ಪ್ರತಿಕ್ರಿಯೆಯನ್ನು ನೀಡದ ಪ್ರಧಾನಿಗಳ ಉದ್ಧಟತನ ಒಂದು ಕಡೆ. ಮತ್ತೊಂದು ಕಡೆ ಆರೋಪಿತ ಸ್ಥಾನದ ಕೇಂದ್ರ ಚುನಾವಣಾ ಆಯೋಗವು ಸೂಕ್ತ ಸ್ಪಷ್ಟೀಕರಣಗಳನ್ನು…

Read More