
ಪಿಪಿಪಿ ಮಾದರಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ವಿರೋಧಿಸಿ ಎಬಿವಿಪಿ ಪ್ರತಿಭಟನೆ: ಹಲವರ ಬಂಧನ, ಬಿಡುಗಡೆ
ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 2 : ಪಿಪಿಪಿ ಮಾದರಿಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸುವುದನ್ನು ವಿರೋಧಸಿ ಕೈ ಬಿಡುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಅನೇಕ ಎಬಿವಿಪಿ ಕಾರ್ಯಕರ್ತರನ್ನು ಬಂಧಿಸಿ ಬಿಡುಗಡೆ ಮಾಡಲಾಯಿತು.ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಎಬಿವಿಪಿ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು, ಅನಂತರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದಾಗ ಪೊಲೀಸರು ಹೋರಾಟಗಾರರನ್ನು ತಡೆದರು. ಆ ವೇಳೆ ಪೊಲೀಸರು ಹಾಗೂ…