
ದೋಷರಹಿತ-ಅಪಘಾತ ರಹಿತ ಹೆಸ್ಕಾಂಗೆ ಕ್ರಮ- ಅಧ್ಯಕ್ಷ ಸೈಯ್ಯದ ಅಜೀಮಪೀರ ಎಸ್.ಖಾದ್ರಿ
ಸಪ್ತಸಾಗರ ವಾರ್ತೆ,ವಿಜಯಪುರ, ಜು. 25:ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಇಂಧನ ಸಚಿವರ ಮಾರ್ಗದರ್ಶನದಲ್ಲಿ ಈಗಾಗಲೇ ಇರುವ ಸಂಪನ್ಮೂಲಗಳ ಸದ್ಬಳಕೆ ಮಾಡಿಕೊಂಡು ಇರುವ ಸಣ್ಣ ಪುಟ್ಟ ಸಮಸ್ಯೆಗಳನ್ನು ಪರಿಹರಿಸಿ ದೋಷರಹಿತ, ಅಪಘಾತ ರಹಿತ ಹೆಸ್ಕಾಂವನ್ನಾಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುತ್ತಿದೆ ಎಂದು ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಅಧ್ಯಕ್ಷ, ಮಾಜಿ ಶಾಸಕ ಸೈಯ್ಯದ ಅಜೀಮಪೀರ ಎಸ್.ಖಾದ್ರಿ ಅವರು ಹೇಳಿದರು.ನಗರದ ಬಿಡಿಎ ಕಚೇರಿಯ ಹತ್ತಿರವಿರುವ ಹೆಸ್ಕಾಂ ಅಧೀಕ್ಷಕ ಅಭಿಯಂತರರ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹೆಸ್ಕಾಂ ವ್ಯಾಪ್ತಿಯ 7…