ಮತದಾರರ ಪಟ್ಟಿ ಪರಿಷ್ಕರಣೆಗೆ ಬಿಜೆಪಿ ಸಕ್ರಿಯ ಸಹಕಾರ: ಸಂದೀಪ ಪಾಟೀಲ
ಸಪ್ತಸಾಗರ ವಾರ್ತೆ,ವಿಜಯಪುರ, ಆ.1: ನಗರದಲ್ಲಿ ದೋಷರಹಿತ ಹಾಗೂ ಪಾರದರ್ಶಕ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವ ಚುನಾವಣಾ ಆಯೋಗದ ಎಸ್‌ಐಆರ್ (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆಗೆ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಬಿಜೆಪಿ ನಗರ ಘಟಕದ ಅಧ್ಯಕ್ಷ ಸಂದೀಪ ಪಾಟೀಲ ಹೇಳಿದರು.ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರ ನಗರದಲ್ಲಿ ಒಟ್ಟು 2,90,479 ಮತದಾರರಿದ್ದು, ಈ ಪೈಕಿ 2,04,368 ಮತದಾರರ ಮಾಹಿತಿಯನ್ನು ಡಿಜಿಟೈಸೇಶನ್ ಮಾಡಲಾಗಿದೆ. ಇದುವರೆಗೆ ಶೇ.70.35ರಷ್ಟು ಕಾರ್ಯ…


