ದಲಿತ ಮಹಿಳೆಗೆ ಅವಹೇಳನಕಾರಿ ಹೇಳಿಕೆ ನೀಡಿದ ಶಾಸಕ ಯತ್ನಾಳ ವಿರುದ್ಧ ಪ್ರತಿಭಟನೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 18:ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಅವರು ಕೊಪ್ಪಳದಲ್ಲಿ ದಲಿತ ಮಹಿಳೆಗೆ ಅವಹೇಳನಕಾರಿ ಹೇಳಿಕೆ ನೀಡಿದ್ದನ್ನು ಖಂಡಿಸಿ ವಿಜಯಪುರ ನಗರ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕ ಹಾಗೂ ಜಲನಗರ ಬ್ಲಾಕ್ ಕಾಂಗ್ರೆಸ್ ಘಟಕದ ವತಿಯಿಂದ ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.ಇತ್ತೀಚೆಗೆ ಕೊಪ್ಪಳದಲ್ಲಿ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಅವರು ಸಾಮಾನ್ಯ ದಲಿತ ಮಹಿಳೆ ಕೂಡ ಚಾಮುಂಡಿಯ ಮುಡಿಗೆ ಹೂವನ್ನು ಮುಡಿಸಲು ಯೋಗ್ಯರಲ್ಲ. ಸನಾತನ ಧರ್ಮದವರು ಮಾತ್ರ…

Read More

ಕುರಿಗಾರರ ಮೇಲಿನ ದೌರ್ಜನ್ಯ ತಡೆಗೆ ಆಗ್ರಹ

ಸಪ್ತಸಾಗರ ವಾರ್ತೆ ವಿಜಯಪುರ, ಆ. 30:ಅರಣ್ಯ ಇಲಾಖೆಯಿಂದ ಕುರಿಗಾರರ ಮೇಲೆ ಆಗುತ್ತಿರುವ ಕಿರುಕುಳ, ದೌರ್ಜನ್ಯ ತಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಕುರಿಗಾರರ ಸಂಘದ ಅಧ್ಯಕ್ಷ ಬೀರಪ್ಪ ಜುಮನಾಳ ಜಿಲ್ಲಾಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.ಕೆಲವು ಕಡೆ ಅರಣ್ಯ ಪ್ರದೇಶಗಳಲ್ಲಿ ವಿನಾಕಾರಣ ಕುರಿಗಾರರ ಮೇಲೆ ದಬ್ಬಾಳಿಕೆ, ಬಲತ್ಕಾರ ನಡೆದಿರುವುದು ಕಂಡುಬರುತ್ತದೆ. ಆದ್ದರಿಂದ ಸಂಬಂಧ ಪಟ್ಟ ಅಧಿಕಾರಿಗಳು ತಮ್ಮ ಸಿಬ್ಬಂದಿಗಳಿಗೆ ಸರ್ಕಾರದ ನೀತಿ ನಿಯಮಗಳ ಹೊರತುಪಡಿಸಿ ನಮ್ಮ ಕುರಿಗಾರರೊಂದಿಗೆ ಸಂಘರ್ಷಕ್ಕೆ ಇಳಿಯಬಾರದು ಎಂದು ಸೂಕ್ತ ತಿಳುವಳಿಕೆ ನೀಡಬೇಕೆಂದು ಅವರು ಕೇಳಿಕೊಂಡಿದ್ದಾರೆ.ಕುರಿಗಾರರು ಅನಕ್ಷರಸ್ಥರು, ಮುಗ್ಧರು…

Read More

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುಧ್ಧ ಷಡ್ಯಂತ್ರ ರೂಪಿಸಿದವರನ್ನು ಶಿಕ್ಷೆಗೆ ಗುರಿಪಡಿಸುವಂತೆ ಆಗ್ರಹ

ಸಪ್ತಸಾಗರ, ವಾರ್ತೆ, ವಿಜಯಪುರ, ಆ. 13 :ಪವಿತ್ರ ಪುಣ್ಯ ಕ್ಷೇತ್ರ ಧರ್ಮಸ್ಥಳ ವಿರುಧ್ಧ ಷಡ್ಯಂತ್ರ ರೂಪಿಸಿದವರನ್ನು ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿ ವಿವಿಧ ಹಿಂದೂ ಸಂಘಟನೆ ಮುಖಂಡರು ಹಾಗೂ ಧರ್ಮಸ್ಥಳದ ಭಕ್ತಾದಿಗಳು ಬುಧವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.ನಗರದ ಸಿದ್ಧೇಶ್ವರ ದೇವಸ್ಥಾನದಿಂದ ಪ್ರಮುಖ ಬೀದಿಗಳಲ್ಲಿ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಯಿತು. ಅಂಬೇಡ್ಕರ್ ವೃತ್ತಕ್ಕೆ ಆಗಮಿಸಿದ ಮೆರವಣಿಗೆ ನಂತರ ಬೃಹತ್ ಪ್ರತಿಭಟನೆ ನಡೆಸಲಾಯಿತು.ನಿಂಬೆ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪುರ, ಪ್ರಮುಖರಾದ ಶಿವಾನಂದ ದೇಸಾಯಿ, ಅಪ್ಪುಗೌಡ ಪಾಟೀಲ್(ಮನಗೂಳಿ),…

Read More

ಸುಕ್ಷೇತ್ರ ಧರ್ಮಸ್ಥಳದ ಅಪಪ್ರಚಾರದ ವಿರುದ್ಧ ಆಗಸ್ಟ್ 13ರಂದು ಪ್ರತಿಭಟನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 11:ಸುಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆದಿರುವ ಅಪಪ್ರಚಾರವನ್ನು ಖಂಡಿಸಿ ಆ. 13ರಂದು ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಶ್ರೀಧರ್ಮಸ್ಥಳ ಭಕ್ತಾಭಿಮಾನಿ ಹಾಗೂ ಲಿಂಬೆ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪುರ ಹೇಳಿದರು.ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.ಶ್ರೀ ಧರ್ಮಸ್ಥಳದ ಬಗ್ಗೆ ಷಡ್ಯಂತ್ರ ರೂಪಿಸಿ ಸುಕ್ಷೇತ್ರಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನ ನಡೆದಿದೆ. ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದರು.ಆ. 13ರಂದು ವಿಜಯಪುರ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಡಾ….

Read More