ಎಐ ಬಳಕೆಯಿಂದ ವಿಜಯಪುರ ಪ್ರವಾಸೋದ್ಯಮಕ್ಕೆ ಹೊಸ ಆಯಾಮ
ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ, ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ: ಶಾಸಕ ವಿಠ್ಠಲ ಕಟಕಧೋಂಡ ಸಪ್ತಸಾಗರ ವಾರ್ತೆ, ವಿಜಯಪುರ, ಸೆ.27: ವಿಜಯಪುರದ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ, ಪ್ರವಾಸಿ ತಾಣಗಳ ಅಭಿವೃದ್ಧಿ ಹಾಗೂ ಅಗತ್ಯ ಮೂಲಸೌಕರ್ಯ ಕಲ್ಪಿಸುವ ಮೂಲಕ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಮತ್ತಷ್ಟು ಉತ್ತೇಜನ ನೀಡಲಾಗುವುದು ಎಂದು ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ ಹೇಳಿದರು.ನಗರದ ಇಬ್ರಾಹಿಂ ರೋಜಾ ಆವರಣದಲ್ಲಿ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ ‘ಡಿಜಿಟಲ್ ಕಾರ್ಯಸೂಚಿ ಮತ್ತು ಕೃತಕ ಬುದ್ಧಿಮತ್ತೆ (ಎಐ) ಬಳಸಿ ಪ್ರವಾಸೋದ್ಯಮ ಮರುಸೃಷ್ಟಿ’ ಧ್ಯೇಯವಾಕ್ಯದೊಂದಿಗೆ ಆಯೋಜಿಸಿದ್ದ…


