ಶಾಲೆಗಳಿಗೆ ಆನ್ಲೈನ್ ಶಿಕ್ಷಣದ ಮೂಲಕ ಪಾಠ ಬೋಧನೆಗೆ ಪ್ರಧಾನಿ ಮೋದಿ ಸಲಹೆ ಹಾಸ್ಯಾಸ್ಪದ: ಅಜಮನಿ
ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 10:ಜಾಗತಿಕ ಮಟ್ಟದಲ್ಲಿ ಉದ್ಭವಿಸಿರುವ ಬಿಕ್ಕಟ್ಟಿನ ಸಂದರ್ಭದಲ್ಲಿ ಶಾಲೆಗಳಿಗೆ ಆನ್ಲೈನ್ ಶಿಕ್ಷಣದ ಮೂಲಕ ಪಾಠ ಬೋಧನೆ ನಡೆಸುವಂತೆ ಕೇಂದ್ರ ಸರ್ಕಾರ ಸೂಚಿಸಿರುವುದು ಗಮನಾರ್ಹ.ಆದರೆ ದೇಶದ ಬಡ, ಶೋಷಿತ ಹಾಗೂ ಹಿಂದುಳಿದ ಸಮುದಾಯಗಳ ವಿದ್ಯಾರ್ಥಿಗಳ ವಾಸ್ತವ ಪರಿಸ್ಥಿತಿಯನ್ನು ಪರಿಗಣಿಸದೆ ಇಂತಹ ನಿರ್ಧಾರಗಳನ್ನು ಕೈಗೊಳ್ಳುವುದು ಶಿಕ್ಷಣದ ಹಕ್ಕಿನ ಮೇಲೆಯೇ ಪ್ರಶ್ನೆ ಹುಟ್ಟಿಸುವಂತಾಗಿದೆ. ಇದು ಹಾಸ್ಯಾಸ್ಪದವಾಗಿದೆ ಎಂದು ದ್ರಾವಿಡ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಅಕ್ಷಯಕುಮಾರ ಅಜಮನಿ ಟೀಕಿಸಿದ್ದಾರೆ.ದೇಶದ ಅನೇಕ ನಗರಗಳ ಕೊಳಗೇರಿ ಪ್ರದೇಶಗಳಲ್ಲಿ ವಾಸಿಸುವ ಮಕ್ಕಳು, ಆದಿವಾಸಿ ಸಮುದಾಯದ…


