ಅಕ್ಕಮಹಾದೇವಿ ಸ್ತ್ರೀ ಸ್ವಾತಂತ್ರ‍್ಯ ಮತ್ತು ಸಮಾನತೆಯ ಸಂಕೇತ- ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಅಭಿಮತ
ಸಪ್ತಸಾಗರ ವಾರ್ತೆ,ವಿಜಯಪುರ, ಏ. 2: ಅನುಭವ ಮಂಟಪವು ಶರಣ ಚಳವಳಿಯ ಹೃದಯವಾಗಿತ್ತು. ಇಲ್ಲಿ ಮಹಿಳೆಯರು ಮೌನ ಶ್ರೋತೃಗಳಾಗಿರಲಿಲ್ಲ. ಅವರು ತರ್ಕಕಾರ್ತಿಯರು, ಪ್ರಶ್ನಕರೂ ಮತ್ತು ವಚನ ರಚನಾಕಾರರೂ ಆಗಿದ್ದರು. ಅಕ್ಕಮಹಾದೇವಿ ಅನುಭವ ಮಂಟಪದಲ್ಲಿ ಪುರುಷ ಶರಣರ ಮುಂದೆ ಧೈರ್ಯವಾಗಿ ಮಾತನಾಡಿದರು. ಹೀಗಾಗಿ ಅಕ್ಕಮಹಾದೇವಿ ಸ್ತ್ರೀ ಸ್ವಾತಂತ್ರ‍್ಯ ಮತ್ತು ಸಮಾನತೆಯ ಸಂಕೇತವಾಗಿದ್ದಾರೆ ಎಂದು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಹೇಳಿದರು.ಇಲ್ಲಿಯ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 12ನೇ…


