
ವಿದ್ಯಾರ್ಥಿನಿಯರ ಸರ್ವತೋಮುಖ ಅಭಿವೃದ್ಧಿಗೆ ಮಹಿಳಾ ವಿವಿ ಕಟ್ಟಿಬದ್ಧ : ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ
ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 2: ವಿದ್ಯಾರ್ಥಿನಿಯರ ಸರ್ವತೋಮುಖ ಅಭಿವೃದ್ಧಿಗೆ ಮತ್ತು ವ್ಯಕ್ತಿತ್ವದ ಬೆಳವಣಿಗೆಗೆ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಕಟಿಬದ್ಧವಾಗಿದೆ ಎಂದು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಭರವಸೆ ನೀಡಿದರು.ಇಲ್ಲಿಯ ಮಹಿಳಾ ವಿವಿಯ ಆವರಣದಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಸ್ನಾತಕೋತ್ತರ ತರಗತಿಗಳ ಪ್ರವೇಶಾತಿ ಕೌನ್ಸಿಲಿಂಗ್ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿನಿಯರ ಜ್ಞಾನಾರ್ಜನೆಗೆ ಬೇಕಾದ ಎಲ್ಲ ಬಗೆಯ ಅವಕಾಶಗಳನ್ನು ಮಹಿಳಾ ವಿವಿ ಸೃಷ್ಟಿಸುತ್ತದೆ ಎಂದರು.ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಅತ್ಯಾಧುನಿಕ ಬೋಧನಾ ತಂತ್ರಗಳು- ಸ್ಮಾರ್ಟಬೋರ್ಡ್ ಮತ್ತು ಡಿಜಿಟಲ್…