ಬಬಲೇಶ್ವರದಲ್ಲಿ ಮತದಾರರ ಹಕ್ಕಿನ ಮೇಲೆ ದಾಳಿ: ಎಂ.ಬಿ. ಪಾಟೀಲ ಆರೋಪ
ಎಸ್ಐಆರ್ ಹೆಸರಿನಲ್ಲಿ ಅಕ್ರಮಕ್ಕೆ ಕಡಿವಾಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 26:ಬಬಲೇಶ್ವರ ಮತಕ್ಷೇತ್ರದ ಮತದಾರರ ಹಕ್ಕಿನ ಮೇಲೆ ದಾಳಿ ನಡೆಸಲು ಮುಂದಾದ ಬಿಜೆಪಿಯವರ ಕೃತ್ಯಕ್ಕೆ ಕಡಿವಾಣ ಹಾಕಲಾಗಿದ್ದು, ಇದಕ್ಕೆ ಪ್ರತಿಯಾಗಿ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ದೇಶದ ವಿವಿಧೆಡೆ ಎಸ್ಐಆರ್ (ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯ…


