
ತ್ಯಾಗ, ಬಲಿದಾನದ ಸ್ಮರಣೆಯೇ ಸ್ವಾತಂತ್ರೋತ್ಸವ- ಅಮರೇಶ ಸಾಲಕ್ಕಿ
ಸಪ್ತಸಾಗರ ವಾರ್ತೆ, ವಿಜಯಪುರ, ಆ. 17 :ನಾವು ಸ್ವಾತಂತ್ರ್ಯ ದಿನವನ್ನು ಹಬ್ಬದಂತೆ ಸಂಭ್ರಮದಿಂದ ಆಚರಿಸುತ್ತಿದ್ದೇವೆ. ದೇಶಕ್ಕಾಗಿ ನಿಸ್ವಾರ್ಥವಾಗಿ ಹೋರಾಟ ಮಾಡಿದ ಹೋರಾಟಗಾರರ ತ್ಯಾಗ, ಬಲಿದಾನದ ಸ್ಮರಣೆಯಾಗಿದೆ ಎಂದು ಇತಿಹಾಸ ಉಪನ್ಯಾಸಕ ಅಮರೇಶ ಸಾಲಕ್ಕಿ ಹೇಳಿದರು.ನಗರದ ಎಸ್.ಕುಮಾರ ವಿದ್ಯಾವರ್ಧಕ ಸಂಸ್ಥೆಯ ಸರಸ್ವತಿ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಮತ್ತು ಎಸ್.ಕುಮಾರ ಮಹೇಶ ಪಿಯು ಕಾಲೇಜಿನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ನಾವು ಅನುಭವಿಸುತ್ತಿರುವ ಸ್ವಾತಂತ್ರ್ಯ ಅಷ್ಟು ಸುಲಭವಾಗಿ ಸಿಕ್ಕಿರುವುದಿಲ್ಲ. ಅದಕ್ಕಾಗಿ…