ವಿಜಯಪುರದ ಪ್ರವಾಸಿ ತಾಣಗಳ ಪರಿಚಯಕ್ಕೆ ‘ಡಿಸ್ಕವರ್ ವಿಜಯಪುರ’ ಆ್ಯಪ್

ಸಪ್ತಸಾಗರ ವಾರ್ತೆ ವಿಜಯಪುರ, ಅ. 5: ವಿಜಯಪುರದ ಐತಿಹಾಸಿಕ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಡಿಜಿಟಲ್ ತಂತ್ರಜ್ಞಾನದ ಮೂಲಕ ಪ್ರವಾಸಿಗರಿಗೆ ಪರಿಚಯಿಸುವ ಉದ್ದೇಶದಿಂದ ಬಿಎಲ್‌ಡಿಇಎ ಸಂಸ್ಥೆಯ ವಿ.ಪಿ. ಡಾ. ಪಿ.ಜಿ. ಹಳಕಟ್ಟಿ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಕಾಲೇಜಿನ ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಕಲಿಕೆ ವಿಭಾಗದ ವಿದ್ಯಾರ್ಥಿಗಳು ‘ಡಿಸ್ಕವರ್ ವಿಜಯಪುರ’ (Discover Vijayapura) ಎಂಬ ಸ್ಮಾರ್ಟ್ ಪ್ರವಾಸೋದ್ಯಮ ಆ್ಯಪ್ ಅಭಿವೃದ್ಧಿಪಡಿಸಿದ್ದಾರೆ.ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ಸೆ.27ರಂದು ನಗರದ ಐತಿಹಾಸಿಕ ಇಬ್ರಾಹಿಂ ರೋಜಾದಲ್ಲಿ ಆ್ಯಪ್‌ ಬಿಡುಗಡೆ ಮಾಡಲಾಯಿತು.ಆ್ಯಪ್‌ನಲ್ಲಿ ವಿಜಯಪುರದ ಪ್ರಸಿದ್ಧ…

Read More

ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ,ಡಿ.9: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2025-26ನೇ ಸಾಲಿನ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ನೀಡಲಾಗುವ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಆದರ್ಶವಾಗಿ ಸೇವೆ ಸಲ್ಲಿಸುತ್ತಿರುವ ವ್ಯಕ್ತಿ ಹಾಗೂ ಸಂಸ್ಥೆಗಳು ಮತ್ತು ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡುತ್ತಿರುವ ಮಹಿಳೆಯರೂ ಸೇರಿದಂತೆ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯದಿಂದ ಹೋರಾಡಿದಂತಹ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದೆ.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ…

Read More

ಹೈಟೆಕ್ ಹಾರ್ವೆಸ್ಟರ್ ಹಬ್ : ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ.3: 2025-26 ನೇ ಸಾಲಿಗೆ ಕೃಷಿ ಇಲಾಖೆ ವತಿಯಿಂದ ಹೈಟೆಕ್ ಹಾರ್ವೆಸ್ಟರ್ ಹಬ್ ಕಾರ್ಯಕ್ರಮದಡಿ ಶುಗರ್ ಕೇನ ಹಾರ್ವೆಸ್ಟರ್ ಹಬ್ ಗಳನ್ನು ಹಾಗೂ ಕಂಬೈನ್ಸ್ ಹಾರ್ವೆಸ್ಟರ್ ಹಬ್‍ಗಳನ್ನು ಸಹಾಯಧನದಡಿ ವಿತರಿಸಲು ವೈಯಕ್ತಿಕ ಫಲಾನುಭವಿಗಳಿಗೆ ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪಿಸಲು ಅವಕಾಶ ನೀಡುವ ನಿಟ್ಟಿನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆ.18 ಕೊನೆಯ ದಿನಾಂಕವಾಗಿದೆ.ಸಾಮಾನ್ಯ ಹಾಗೂ ಪರಿಶಿಷ್ಟ ವರ್ಗದಡಿ ವೈಯಕ್ತಿಕ ಫಲಾನುಭವಿಗಳಿಗೆ ಶುಗರ್ ಕೇನ ಹಾರ್ವೆಸ್ಟರ್ ಹಾಗೂ ಕಂಬೈನ್ಸ್ ಹಾರ್ವೆಸ್ಟರ್ ಹಬ್‍ಗಳನ್ನು ಸಹಾಯಧನದಡಿ ಅನುಷ್ಠಾನಗೊಳಿಸಲಾಗುತ್ತಿದ್ದು,…

Read More

ತೋಟಗಾರಿಕೆ ಇಲಾಖೆಯಿಂದ ಶೇ.25ರಷ್ಟು ಸಹಾಯಧನಕ್ಕೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ ವಿಜಯಪುರ,ಆ. 18 : ಹೊಸದಾಗಿ ನಿರ್ಮಿಸಿದ ತೋಟಗಾರಿಕೆ ಉತ್ಪನ್ನಗಳ ಪೂರ್ಣ ಪ್ರಮಾಣದ ಮೌಲ್ಯವರ್ಧಿತ ಸಂಸ್ಕರಣೆ ಘಟಕಗಳು, ಔಷಧಿ ಮತ್ತು ಸುಗಂಧ ದ್ರವ್ಯಗಳ ಘಟಕಗಳನ್ನೊಳಗೊಂಡಂತೆ, ಪ್ರಾಯೋಗಿಕ ಉತ್ಪಾದನೆ ಮತ್ತು ವಾಣಿಜ್ಯ ಉತ್ಪಾದನೆ ಕೈಗೊಳ್ಳುವ ಘಟಕಗಳಿಗೆ ತೋಟಗಾರಿಕೆ ಇಲಾಖೆ ವತಿಯಿಂದ ಒದಗಿಸಲಾಗುವ ಶೇ.25ರಷ್ಟು ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ದ್ರಾಕ್ಷಾರಸ ಉತ್ಪಾದನಾ ಘಟಕ, ಹಣ್ಣು ಮತ್ತು ತರಕಾರಿ ಸಂಸ್ಕರಣೆ-ಕ್ಯಾನಿಂಗ್ ಘಟಕ, ಉಪ್ಪಿನಕಾಯಿ ಘಟಕ, ಸುಗಂಧದ್ರವ್ಯ-ಔಷಧಿ ಸಸ್ಯಗಳ ಸಂಸ್ಕರಣಾ ಘಟಕಗಳು, ಗರ್ಕಿನ್ ಘಟಕಗಳು ಇತ್ಯಾದಿ ಘಟಕಗಳನ್ನು ಸಹಾಯಧನಕ್ಕೆ ಪರಿಗಣಿಸಲಾಗುವುದು. ಈ ಕುರಿತಂತೆ…

Read More