ಅತಿಥಿ ಉಪನ್ಯಾಸಕರ ನೇಮಕಾತಿಗೆ ಸರ್ಕಾರ ಅಸ್ತು: ವಿದ್ಯಾರ್ಥಿಗಳ ಹೋರಾಟಕ್ಕೆ ಸಂದ ಜಯ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 30: ಅತಿಥಿ ಉಪನ್ಯಾಸಕರ ನೇಮಕಾತಿಗೆ ಸರ್ಕಾರ ಒಪ್ಪಿರುವುದನ್ನು ಎಐಡಿಎಸ್ ಒ ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂತ ಸ್ವಾಗತಿಸಿದ್ದಾರೆ.ರಾಜ್ಯದಲ್ಲಿ ಪದವಿ ಕಾಲೇಜುಗಳು ಆರಂಭವಾಗಿ 2 ತಿಂಗಳಾದರೂ, ಅತಿಥಿ ಉಪನ್ಯಾಸಕರಿಲ್ಲದೆ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ತರಗತಿಗಳನ್ನೇ ನಡೆಸದೆ ರಾಜ್ಯದ ಹಲವು ವಿಶ್ವವಿದ್ಯಾಲಯಗಳು ಪರೀಕ್ಷೆಗಳನ್ನು ಕೂಡ ಘೋಷಿಸಿವೆ. ಇನ್ನೊಂದೆಡೆ, ಖಾಸಗಿ ಕಾಲೇಜುಗಳಲ್ಲಿ ಸರಾಗವಾಗಿ ಪಾಠಗಳು ನಡೆದು ಅಲ್ಲಿನ ವಿದ್ಯಾರ್ಥಿಗಳು ಪರೀಕ್ಷೆಗೆ ತಯಾರಾಗುತ್ತಿದ್ದಾರೆ. ರಾಜ್ಯದ ಬಡ ವಿದ್ಯಾರ್ಥಿಗಳಿಗಾದ ಈ ಘೋರ ಅನ್ಯಾಯವನ್ನು ಖಂಡಿಸಿ ಎಐಡಿಎಸ್ಓ ನೇತೃತ್ವದಲ್ಲಿ…

Read More

ವಿಜಯಪುರ ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ ₹270 ಕೋಟಿ ಅನುದಾನಕ್ಕೆ ಒಪ್ಪಿಗೆ: ಎಂ.ಬಿ. ಪಾಟೀಲ

ಸಪ್ತಸಾಗರ ವಾರ್ತೆ, ಬೆಂಗಳೂರು, ಸೆ. 19: ಏರ್‌ಬಸ್‌-320 ಮಾದರಿಯ ದೊಡ್ಡ ವಿಮಾನಗಳ ಕಾರ್ಯಾಚರಣೆ ಮತ್ತು ರಾತ್ರಿ ವೇಳೆ ಲ್ಯಾಂಡಿಂಗ್‌ ಸೌಲಭ್ಯ ಅಭಿವೃದ್ಧಿ ಸೇರಿದಂತೆ ಇತರ ಅನುಕೂಲಗಳಿಗಾಗಿ ವಿಜಯಪುರ ಗ್ರೀನ್‌ಫೀಲ್ಡ್‌ ವಿಮಾನ ನಿಲ್ದಾಣ ಕಾಮಗಾರಿಗಳಿಗೆ ಹೆಚ್ಚುವರಿಯಾಗಿ 270.83 ಕೋಟಿ ರೂ. ಒದಗಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಮತ್ತು ಆ ಜಿಲ್ಲೆಯ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.ಈ ಬಗ್ಗೆ ವಿವರ ಮಾಹಿತಿ ನೀಡಿರುವ ಅವರು, ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ…

Read More