ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಡಿಪಿಆರ್ ಮಂಜೂರು, ನೋಂದಣಿಯೂ ಪೂರ್ಣ!
ಮುಂದಿನ ವರ್ಷವೇ ಪ್ರವೇಶ ಆರಂಭಿಸಲು ಹೋರಾಟ ಸಮಿತಿ ಆಗ್ರಹ ಸಪ್ತಸಾಗರ ವಾರ್ತೆ,ವಿಜಯಪುರ, ಆ. 19:ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾಗಬೇಕೆಂಬ ಅರ್ಧ ಶತಮಾನಕ್ಕೂ ಹೆಚ್ಚಿನ ಅವಧಿಯ ಜನರ ಕನಸು ನನಸಾಗುವತ್ತ ಮಹತ್ವದ ಹೆಜ್ಜೆ ಇಟ್ಟಿದೆ. ಸರ್ಕಾರಿ ವೈದ್ಯಕೀಯ ಕಾಲೇಜಿನ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಗೊಂಡು ಸರ್ಕಾರಕ್ಕೆ ಸಲ್ಲಿಕೆಯಾಗಿದ್ದು, ಮಂಜೂರಾತಿ ದೊರೆತಿದೆ. ಕಾಲೇಜಿನ ಅಧಿಕೃತ ನೋಂದಣಿ ಪ್ರಕ್ರಿಯೆಯೂ ಪೂರ್ಣಗೊಂಡಿದೆ ಎಂದು ವಿಶೇಷ ಅಧಿಕಾರಿಗಳಾದ ಡಾ. ಜಾನಕಿ ತೊರವಿ ತಿಳಿಸಿದ್ದಾರೆ.ಸರ್ಕಾರಿ ವೈದ್ಯಕೀಯ ಕಾಲೇಜಿಗಾಗಿ ವಿಜಯಪುರದಲ್ಲಿ ನಡೆದ 116…


