ಮಳೆ ಹಾನಿ ಪ್ರದೇಶದ ಮೂಲಭೂತ ಸೌಕರ್ಯ ತ್ವರಿತವಾಗಿ ಕಲ್ಪಿಸಲು ಜಿಲ್ಲಾಧಿಕಾರಿ ಡಾ.ಆನಂದ ಅಧಿಕಾರಿಗಳಿಗೆ ಸೂಚನೆ
ಸಪ್ತಸಾಗರ ವಾರ್ತೆ ವಿಜಯಪುರ, ಅ. 3:ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಿಯೇ ಅತೀ ಹೆಚ್ಚು ಮಳೆ ನಮ್ಮ ಜಿಲ್ಲೆಯಲ್ಲಿಯಾಗಿದ್ದು ಮಳೆಯಿಂದ ಹಾನಿಗೀಡಾದ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳನ್ನು ತ್ವರಿತವಾಗಿ ಕಲ್ಪಿಸಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ವಿಡಿಯೋ ಸಂವಾದ ಮೂಲಕ ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ಸಭೆಯ ನಂತರ ಜಿಲ್ಲಾ ವಿಪತ್ತು ನಿರ್ವಹಣಾ ಸಭೆ ನಡೆಸಿದ ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರು, ಜಿಲ್ಲೆಯಲ್ಲಿ ಮುಂಗಾರು…


