12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ನಕಲಿ ಡಿಎಸ್‌ಪಿ ಬಂಧನ; ಬೆಂಗಳೂರಿನಲ್ಲಿ ಆರೋಪಿ ಸೆರೆ
ಸಪ್ತಸಾಗರ ವಾರ್ತೆ,ವಿಜಯಪುರ, ಜು.7: ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ, ತಾನು ಡಿಎಸ್‌ಪಿ ಎಂದು ನಂಬಿಸಿ ನಿರುದ್ಯೋಗಿ ಯುವಕರಿಗೆ ಪೊಲೀಸ್ ಹಾಗೂ ಇತರೆ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ವಂಚನೆ ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ ಜಿಲ್ಲೆಯ ಎಪಿಎಂಸಿ ಠಾಣೆ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬಂಧಿತನನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ವರಗೋಡದಿನ್ನಿ ಗ್ರಾಮದ ಗ್ಯಾನನಗೌಡ @ ಜ್ಞಾನಗೌಡ @ ಗಣೇಶ @ ಸಿ. ಸಂಪತ್‌ಕುಮಾರ (31) ಎಂದು ಗುರುತಿಸಲಾಗಿದೆ. ಕೊಲೆ ಯತ್ನ ಪ್ರಕರಣದಲ್ಲೂ ಆರೋಪ 2014ರಲ್ಲಿ…


