ವಿಜಯಪುರ ಜಿಲ್ಲೆಗೆ 371 ಜೆ ಮೀಸಲಾತಿ ತಕ್ಷಣ ಒದಗಿಸಲು ಆಗ್ರಹ
ಸಪ್ತಸಾಗರ ವಾರ್ತೆ,ಮುದ್ದೇಬಿಹಾಳ, ಆ. 14:371 ಜೆ ಮೀಸಲಾತಿ ವ್ಯಾಪ್ತಿಯಿಂದ ಹೊರಗುಳಿದಿರುವ ವಿಜಯಪುರ ಜಿಲ್ಲೆಯನ್ನು ಕಲ್ಯಾಣ ಕರ್ನಾಟಕ ಮೀಸಲಾತಿ ವ್ಯಾಪ್ತಿಗೆ ಸೇರ್ಪಡೆಗೊಳಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಕಳುಹಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ವಿಕಲಚೇತನರ ವಿವಿಧೋದ್ದೇಶ, ಗ್ರಾಮೀಣ ಪುನರ್ವಸತಿ, ನಗರ ಪುನರ್ವಸತಿ ರಾಜ್ಯ ಒಕ್ಕೂಟ ಹಾಗೂ ತಾಲೂಕು ವಿಕಲಚೇತನರ ಸಂಘ-ಸಂಸ್ಥೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಲಾಯಿತು. ಬಳಿಕ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ವಿಶೇಷ ಚೇತನರ ವಿವಿಧೋದ್ದೇಶಗಳ ಒಕ್ಕೂಟದ ತಾಲೂಕು ಅಧ್ಯಕ್ಷ ಎಸ್.ಕೆ. ಘಾಟಿ…


