ಜಿಲ್ಲಾ ಮಟ್ಟದ ಆಸ್ಮಿತಾ ವುಮೆನ್ಸ್ ಸೈಕ್ಲಿಂಗ್ ಲೀಗ್‌ಗೆ ಸಂಸದ ರಮೇಶ ಜಿಗಜಿಣಗಿ ಚಾಲನೆ
ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 13:ಸೈಕ್ಲಿಂಗ್ ಕ್ರೀಡೆಗೆ ರಾಜ್ಯದಲ್ಲೇ ವಿಶಿಷ್ಟ ಗುರುತನ್ನು ಹೊಂದಿರುವ ವಿಜಯಪುರ ನಗರದಲ್ಲಿ ಜಿಲ್ಲಾ ಮಟ್ಟದ ಆಸ್ಮಿತಾ ಖೇಲೋ ಇಂಡಿಯಾ ಮಹಿಳಾ ಸೈಕ್ಲಿಂಗ್ ಸಿಟಿ ಲೀಗ್ ಸ್ಪರ್ಧೆಯನ್ನು ಶನಿವಾರ ಅದ್ಧೂರಿಯಾಗಿ ಆಯೋಜಿಸಲಾಯಿತು.ಕೇಂದ್ರ ಸರ್ಕಾರದ ಕ್ರೀಡಾ ಪ್ರಾಧಿಕಾರ, ಸೈಕ್ಲಿಂಗ್ ಫೆಡರೇಷನ್ ಆಫ್ ಇಂಡಿಯಾ, ಕರ್ನಾಟಕ ರಾಜ್ಯ ಅಮೆಚೂರ್ ಸೈಕ್ಲಿಂಗ್ ಅಸೋಸಿಯೇಶನ್, ಜಿಲ್ಲಾ ಸೈಕ್ಲಿಂಗ್ ಅಸೋಸಿಯೇಶನ್, ವಿಶಾಲ್ ಸೈಕಲ್ ಮಾಲ್, ಜಿಲ್ಲಾಡಳಿತ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಡೆದ ಈ ಲೀಗ್‌ಗೆ ಸಂಸದ…


