ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತ: ಸಂಸದ ಜಿಗಜಿಣಗಿ ಆರೋಪ
ಸಪ್ತಸಾಗರ ವಾರ್ತೆ, ವಿಜಯಪುರ,ಜು. 13:ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಸಂಪೂರ್ಣ ಕುಂಠಿತಗೊಂಡಿದೆ ಎಂದು ಸಂಸದ ರಮೇಶ ಜಿಗಜಿಣಗಿ ಆರೋಪಿಸಿದರು.ಭಾನುವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು,ರಾಜ್ಯದಲ್ಲಿ ಕಾಂಗ್ರೆಸ್ ಎಟಿಎಂ ಸರ್ಕಾರವಾಗಿದೆ. ಆದರೆ ಡೆಬಿಟ್ ಅಕೌಂಟ್ ನಲ್ಲಿ ಹಣವೇ ಇಲ್ಲ ಎಂದು ಛೇಡಿಸಿದರು.ರಾಜ್ಯದಲ್ಲಿ ಎಲ್ಲಿಯೂ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ಹೊರಗುತ್ತಿಗೆ ಆಧಾರದ ಕೆಲಸಗಾರರಿಗೂ ಸಂಬಳವಿಲ್ಲ.ತಮ್ಮರು ಹಿಂದುಳಿದ ವರ್ಗ, ಅಲ್ಪಸಂಖ್ಯಾತ, ದಲಿತಪರ ಸರ್ಕಾರಿ ಎಂದು ಕಾಂಗ್ರೆಸ್ನವರು ಹೇಳುತ್ತಿದ್ದಾರೆ. ಆದರೆ ಯಾವುದೇ ಅಭಿವೃದ್ಧಿ ಇಲ್ಲ. ಎಲ್ಲವೂ ಗ್ಯಾರಂಟಿ ಯೋಜನೆಗಳಿಗೆ ಹಣ ಸೋರಿ ಹೋಗುತ್ತಿದೆ. ಗ್ಯಾರಂಟಿಯಿಂದ…


