ಆ. 11 ರಂದು ಬಿ.ಎಲ್.ಡಿ.ಇ ಲೈಫ್ ಕೇರ್ ಪ್ರೊಡಕ್ಟ್ಸ್ ಘಟಕ ಉದ್ಘಾಟನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 8: ನಗರದ ಬಿ.ಎಲ್.ಡಿ.ಇ ಲೈಫ್ ಕೇರ್ ಪ್ರೊಡಕ್ಟ್ಸ್ ಗಳ ಘಟಕವಾದ ಆರೋಗ್ಯ ಫಾರ್ಮಸಿ ಉದ್ಘಾಟನೆ ಕಾರ್ಯಕ್ರಮ ಆಗಷ್ಡ 11ರಂದು ಸೋಮವಾರ ನಡೆಯಲಿದೆ.770 ಲಿಂಗದ ಗುಡಿ ಹತ್ತಿರವಿರುವ ಬಿ.ಎಲ್.ಡಿ ಸೌಹಾರ್ದ ಸಹಕಾರಿ ಶಾಖೆಯ ನೆಲ ಅಂತಸ್ತಿನಲ್ಲಿ ಕಟ್ಟಡದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಜ್ಞಾನಯೋಗಾಶ್ರಮದ ಅಧ್ಯಕ್ಷ ಶ್ರೀ ಬಸವಲಿಂಗ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ. ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ, ಬಿ.ಎಲ್.ಡಿ.ಇ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ ಶಾಸಕ…

Read More

ಆ. ೧೨ರಿಂದ೧೪ ರವರೆಗೆ ರಾಜ್ಯವ್ಯಾಪಿ ಜಿಲ್ಲಾ ಮಟ್ಟದ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಪ್ರತಿಭಟನಾ ಧರಣಿ

ಸಪ್ತಸಾಗರ ವಾರ್ತೆ, ವಿಜಯಪುರ,ಆ.7:ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆ.೧೨, ೧೩ ಹಾಗೂ ೧೪ರಂದು ರಾಜ್ಯಾದ್ಯಂತ ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಿದ್ದಾರೆ. ಎಂದು ಆಶಾ ಸಂಘಟನೆ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಎಚ್.ಟಿ. ಅವರು ತಿಳಿಸಿದ್ದಾರೆ.ಗುರುವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.ಆಶಾ ಕಾರ್ಯಕರ್ತೆಯರು ಗ್ರಾಮೀಣ ಮತ್ತು ನಗರ ಕೊಳಚೆ ಪ್ರದೇಶದ ಆರೋಗ್ಯದ ಆಶಾಕಿರಣ. ಆರೋಗ್ಯ ಸೇವೆಗಳನ್ನು ಪಡೆಯಲು ಕಷ್ಟಪಡುವ ಗ್ರಾಮೀಣ ಜನತೆಯ, ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳ ಯಾವುದೇ ಆರೋಗ್ಯ ಸಂಬಂಧಿತ ಬೇಡಿಕೆಗಳಿಗೆ ಆಶಾ ಮೊದಲ ಕರೆ ಕೇಂದ್ರವಾಗಿದೆ. ಜನತೆಯ…

Read More

ನಂಜನಗೂಡು ಮಠದಲ್ಲಿ ಆರಾಧನೆ ಪ್ರಯುಕ್ತ ಆ.೫ರಿಂದ ಪ್ರವಚನ

ಸಪ್ತಸಾಗರ ವಾರ್ತೆ,ವಿಜಯಪುರ,ಆ. 3: ಶ್ರೀ ಗುರುಸಾರ್ವಭೌಮರ ಆರಾಧನಾ ಮಹೋತ್ಸವದ ಪ್ರಯುಕ್ತ ಇಲ್ಲಿಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ಆಜ್ಞಾನುಸಾರ ಆ..೫ ರಿಂದ ೯ ರ ವರೆಗೆ ಶ್ರೀ ಗುರುರಾಯರ ಮಹಿಮೆ ಕುರಿತು ಪ್ರವಚನ ಹಮ್ಮಿಕೊಳ್ಳಲಾಗಿದೆ.ಪಂಡಿತ ಡಾ. ಕೃಷ್ಣಾಚಾರ್ಯ ಕಾಖಂಡಕಿ ಅವರು ಪ್ರತಿದಿನ ಸಂಜೆ ೬ ಗಂಟೆಯಿಂದ ೭ ಗಂಟೆ ವರೆಗೆ ಶ್ರೀಮಠದಲ್ಲಿ ಪ್ರವಚನ ಹೇಳಲಿದ್ದಾರೆ.ಸದ್ಭಕ್ತರು ಪ್ರವಚನದ ಲಾಭ ಪಡೆದುಕೊಳ್ಳುವಂತೆ ಶ್ರೀಮಠದ ವಿಚಾರಣಾಕರ್ತಾ ಗೋಪಾಲ ನಾಯಕ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

Read More

ಆ.೭ರಂದು ಉದ್ಯೋಗ ಮೇಳ

ಸಪ್ತಸಾಗರ ವಾರ್ತೆ,ವಿಜಯಪುರ, ಆ.೧: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ವಿಜಯಪುರ ಹಾಗೂ ಸಿಕ್ಯಾಬ್ ಸಂಸ್ಥೆಯ ಮಲಿಕ್ ಸಂದಲ್ ಪಾಲಿಟೆಕ್ನಿಕ್ ವಿಜಯಪುರ, ಇವರ ಸಹಯೋಗದೊಂದಿಗೆ ನಗರದ ಬಾಗಲಕೋಟೆ ರಸ್ತೆಯಲ್ಲಿರುವ ಸಿಕ್ಯಾಬ್ ಸಂಸ್ಥೆಯ ಮಲಿಕ್ ಸಂದಲ್ ಪಾಲಿಟೆಕ್ನಿಕ್ ಕಾಲೇಜ್‌ನಲ್ಲಿ ಆ.೭ರಂದು ಉದ್ಯೊಗ ಮೇಳ ಆಯೋಜಿಸಲಾಗಿದೆ.ಅಂದು ಬೆಳಿಗ್ಗೆ ೧೦ ಗಂಟೆಗೆ ನಡೆಯುವ ಉದ್ಯೋಗ ಮೇಳದಲ್ಲಿ ಬೆಂಗಳೂರಿನ ಪ್ರತಿಷ್ಠಿತ ಎಂಎನ್‌ಸಿ ಕಂಪನಿಗಳು ಹಾಗೂ ಸ್ಥಳೀಯ ಖಾಸಗಿ ಕಂಪನಿಗಳಿಂದ ವಿವಿಧ ಹುದ್ದೆಗಳ ನೇಮಕಾತಿ ನಡೆಯಲಿದೆ. ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ., ಡಿಪ್ಲೋಮಾ ಹಾಗೂ ಯಾವುದೇ ಪದವಿ,…

Read More

ಆಗಸ್ಟ್ 6,7ರಂದು ರಾಜ್ಯ ಮಟ್ಟದ ಜೂಡೋ ತರಬೇತಿ ಮತ್ತು ಪರೀಕ್ಷೆ

ಸಪ್ತಸಾಗರ ವಾರ್ತೆ, ವಿಜಯಪುರ,ಜು.21:ಆ. 6 ಹಾಗೂ 7 ರಂದು ಕರ್ನಾಟಕ ರಾಜ್ಯ ಜೂಡೋ ಸಂಸ್ಥೆಯ ವತಿಯಿಂದ ರಾಮದುರ್ಗ ತಾಲೂಕಿನ ಚಂದ್ರಗಿರಿಯ ಎಸ್.ಎಂ. ಕಲೂತಿ ಕ್ರೀಡಾ ವಸತಿ ಶಾಲೆಯಲ್ಲಿ ಚಂದರಗಿ 2 ದಿನದ ತರಬೇತಿ ಮತ್ತು ಬ್ರೌನ್ ಬೆಲ್ಟ್ ಪರೀಕ್ಷೆ, ನಡೆಯಲಿದೆ.ವಿಜಯಪುರ ಜಿಲ್ಲೆಯ ಜೂಡೋ ಕ್ರೀಡಾಪಟುಗಳು, ಭಾಗವಹಿಸುವವರು ಮೊ.9901944390 ಗೆ ತಿಳಿಸಬೇಕೆಂದು ವಿಜಯಪುರ ಜಿಲ್ಲಾ ಜೂಡೋ ಸಂಸ್ಥೆಯ ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿ ಬಸವರಾಜ ಬಾಗೇವಾಡಿ ಉತ್ನಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More