ಮಾದಕ ದ್ರವ್ಯ-ವಸ್ತು ಕಡಿವಾಣಕ್ಕೆ ಶಾಲಾ-ಕಾಲೇಜಿನಲ್ಲಿ ಆಂಟಿ ಡ್ರಗ್ ಘಟಕ ಮೂಲಕ ಜಾಗೃತಿ ಮೂಡಿಸಿ -ಜಿಲ್ಲಾಧಿಕಾರಿ ಡಾ. ಆನಂದ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ.17: ಜಿಲ್ಲೆಯಲ್ಲಿ ಮಾದಕ ದ್ರವ್ಯ ಕಡಿವಾಣಕ್ಕಾಗಿ ಮಾದಕ ದ್ರವ್ಯಗಳ ಸೇವನೆಯಿಂದ ಜನರ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಶಾಲಾ ಕಾಲೇಜಿನಲ್ಲಿ ಆಂಟಿ ಡ್ರಗ್ ಘಟಕ ಸ್ಥಾಪಿಸಿ, ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚನೆ ನೀಡಿದರು.ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮಾದಕ ದ್ರವ್ಯಗಳ ನಿರ್ಮೂಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಮಾದಕ ದ್ರವ್ಯ-ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲು ಶಾಲಾ ಕಾಲೇಜ್‍ಗಳಲ್ಲಿ ನಿರ್ಮಿಸಿದ…

Read More

ನನ್ನ ಮತ ನನ್ನ ಹಕ್ಕು ಜಾಗೃತಿ ಅಭಿಯಾನಕ್ಕೆ ಚಾಲನೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ.೧೪: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ನನ್ನ ಮತ ನನ್ನ ಹಕ್ಕು ಜಾಗೃತಿ ಅಭಿಯಾನಕ್ಕೆ ಭಾನುವಾರ ನಗರದ ಗೋಳಗುಮ್ಮಟ ಆವರಣದಲ್ಲಿ ಬೈಕ್ ರ‍್ಯಾಲಿಗೆ ಜಿಲ್ಲಾಧಿಕಾರಿ ಕೆ.ಅನಂದ ಚಾಲನೆ ನೀಡಿದರು.ರಾಜ್ಯದ ರಾಜಧಾನಿಯಲ್ಲಿ ಸೆ.೧೫ರಂದು ಬೃಹತ್ ಕಾರ್ಯಕ್ರಮ ಆಯೊಜಿಸಲಾಗಿದ್ದು, ಪ್ರಜಾಪ್ರಭುತ್ವದ ಕುರಿತು ಎಲ್ಲ ಜಿಲ್ಲೆಗಳಿಂದ ಪ್ರತಿನಿಧಿಗಳನ್ನು ಬೈಕ್ ಮೂಲಕ ಪಾಲ್ಗೊಳ್ಳಲಿದ್ದಾರೆ. ನಮ್ಮ ಜಿಲ್ಲೆಯಿಂದಲೂ ಬೈಕ್ ರ‍್ಯಾಲಿ ಮೂಲಕ ಯುವಕರು ಪ್ರತಿನಿಧಿಸುತ್ತಿದ್ದಾರೆ. ಭವ್ಯವಾದ ಪ್ರಜಾಪ್ರಭುತ್ವ ಪಡೆದ ನಾವುಗಳು ಅದರ ಪಾಲನೆಯನ್ನು ಮಾಡುವುದು ಬಹಳ ಅವಶ್ಯ ಇದೆ ಎಂದು…

Read More

ಮತ ಮೋಸದ ಬಗ್ಗೆ ಜಾಗೃತಿ ಮೂಡಿಸಿ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 13:ವಿಜಯಪುರ ಜಿಲ್ಲಾ ಕಾಂಗ್ರೆಸ್ ಸೇವಾದಳ ಸಮಿತಿ, ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳ ಸಭೆ ಶನಿವಾರ ಜಿಲ್ಲಾ ಕಾಂಗ್ರೆಸ್ ಕಚೇರಿ ಸಭಾಂಗಣದಲ್ಲಿ ನಡೆಯಿತು.ಕೆ.ಪಿ.ಸಿ.ಸಿ. ಸೇವಾದಳದ ರಾಜ್ಯ ಅಧ್ಯಕ್ಷ ಎಂ. ರಾಮಚಂದ್ರಪ್ಪನವರು ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿ, ವಿಜಯಪುರ ಜಿಲ್ಲೆ ಹಾಗೂ ರಾಜ್ಯದಲ್ಲಿ ಕೇಂದ್ರ ಸರಕಾರದ ವಿರೋಧಪಕ್ಷದ ನಾಯಕ ರಾಹುಲ್‌ಗಾಂಧಿ ಅವರ ನಿರ್ದೆಶನದ ಮೇರೆಗೆ ಮತಪಟ್ಟಿಗಳಲ್ಲಿರುವ ದೋಷ ಹಾಗೂ ಮತ ಮೋಸದ ಕುರಿತು ಪಕ್ಷದ ಎಲ್ಲ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು…

Read More

ಪರಿಸರ ಸ್ನೇಹಿ ಗಣೇಶ ವಿಗ್ರಹಗಳ ಬಳಕೆ ಕುರಿತು ಸೂಕ್ತ ತಿಳುವಳಿಕೆ ಮೂಡಿಸಿ- ಜಿಲ್ಲಾಧಿಕಾರಿ ಡಾ. ಆನಂದ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 8:ಜಿಲ್ಲೆಯಾದ್ಯಂತ ಆಚರಿಸುವ ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಪಿಒಪಿ ಹಾಗೂ ರಾಸಾಯನಿಕ ವಸ್ತುಗಳನ್ನು ಬಳಸಿ ತಯಾರಿಸಲಾದ ಗಣೇಶ ವಿಗ್ರಹಗಳನ್ನು ಬಳಸುವುದು ನಿಷೇಧದ ಬಗ್ಗೆ ಹಾಗೂ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ಬಳಕೆ ಕುರಿತು ಜನರಲ್ಲಿ ಸೂಕ್ತ ತಿಳಿವಳಿಕೆ ಮೂಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಆನಂದ ಅವರು ಸೂಚಿಸಿದ್ದಾರೆ.ಶುಕ್ರವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಪರಿಸರಕ್ಕೆ ಹಾನಿಯನ್ನುಂಟು ಮಾಡುವ ಪ್ಲಾಸ್ಟರ್ ಆಫ್ ಪ್ಯಾರಿಸ್ ಹಾಗೂ ರಾಸಾಯನಿಕ…

Read More

ಬಸವನಬಾಗೇವಾಡಿಯಲ್ಲಿ ವ್ಯಸನ ಮುಕ್ತ ದಿನಾಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 1: ದುರ್ವ್ಯಸನಗಳು ಹಾಗೂ ದುಶ್ಚಟಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ, ಮನಸ್ಸು ಪರಿವರ್ತಿಸಿ, ಜನರಲ್ಲಿನ ದುಶ್ಚಟಗಳನ್ನೇ ತಮ್ಮ ಜೋಳಿಗೆಯಲ್ಲಿ ಭಿಕ್ಷೆಯ ರೂಪದಲ್ಲಿ ಸಂಗ್ರಹಿಸಿ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು ಡಾ. ಮಹಾಂತ ಶಿವಯೋಗಿಗಳು ಎಂದು ಅಥಣಿಯ ಮೋಟಗಿಮಠದ ಪ್ರಭು ಚನ್ನಬಸವ ಸಾಮೀಜಿ ಹೇಳಿದರು.ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದಲ್ಲಿ ತಾಲೂಕಾ ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಮಹಾಂತ ಶಿವಯೋಗಿಗಳ ಜಯಂತಿಯ ಪ್ರಯುಕ್ತ ವ್ಯಸನ ಮುಕ್ತ ದಿನಾಚರಣೆಯ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಬಾಗಲಕೋಟೆಯ ಜಮಖಂಡಿ…

Read More

ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ: ಜನಜಾಗೃತಿ ಜಾಥಾಗೆ ಅಪರ ಜಿಲ್ಲಾಧಿಕಾರಿ ಗೆಣ್ಣೂರು ಚಾಲನೆ

ಸಪ್ತಸಾಗರ ವಾರ್ತೆ,ವಿಜಯಪುರ,ಆ.1:ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಪ್ರಯುಕ್ತ ವ್ಯಸನ‌ ಮುಕ್ತ ದಿನಾಚರಣೆ ಕಾರ್ಯಕ್ರಮ ನಡೆಯಿತು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕರ್ನಾಟಕ ರಾಜ್ಯ‌ಮದ್ಯಪಾನ ಸಂಯಮ‌ ಮಂಡಳಿ,ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ,ಸಮಾಜ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಪ್ರಯುಕ್ತ ವ್ಯಸನ‌ ಮುಕ್ತ ದಿನಾಚರಣೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಶ್ರೀ ಸಿದ್ಧೇಶ್ವರ ದೇವಸ್ಥಾನದ ಆವರಣದಿಂದ ಆರಂಭಗೊಂಡಜನಜಾಗೃತಿ…

Read More

ಬಾಲ್ಯ ವಿವಾಹ ತಡೆಗೆ ಜಾಗೃತಿ ಹಾಗೂ ಕಾನೂನು ಅರಿವು ಮೂಡಿಸಿ- ಜಿಲ್ಲಾಧಿಕಾರಿ ಡಾ. ಆನಂದ

ಸಪ್ತಸಾಗರ ವಾರ್ತೆ, ವಿಜಯಪುರ, ಜು.17:ಬಾಲ್ಯವಿವಾಹ, ಬಾಲ ಕಾರ್ಮಿಕ ಪದ್ಧತಿಯಂತಹ ಸಾಮಾಜಿಕ ಅನಿಷ್ಟ ಪದ್ಧತಿಯ ನಿರ್ಮೂಲನೆಗೆ ಸಾಕಷ್ಟು ಪ್ರಚಾರಗೊಳಿಸಿ ಜಾಗೃತಿ ಹಾಗೂ ಕಾನೂನಿನ ಅರಿವು ಮೂಡಿಸಲು ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚಿಸಿದರು.ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಾಲ್ಯ ವಿವಾಹ ನಿಷೇಧ, ಕೌಟುಂಬಿ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ 2005, ನಿಯಮ 2006 ಹಾಗೂ ಪೋಕ್ಸೋ ಕಾಯ್ದೆಯ ಪರಿಶೀಲನಾ ಸಭೆಯ ಅಧ್ಯಕತೆ ವಹಿಸಿ ಮಾತನಾಡಿದ ಅವರು, ಬಾಲ್ಯ ವಿವಾಹ ನಿಷೇಧ ಕಾಯ್ದೆ,…

Read More