ಸ್ವಸ್ಥ ಮಹಿಳೆ–ಸುಂದರ ಸಮಾಜ: ಆರೋಗ್ಯ ಜಾಗೃತಿಗೆ ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ ವಿತರಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ.2: ಮಹಿಳೆಯರ ಆರೋಗ್ಯವೇ ಕುಟುಂಬ ಹಾಗೂ ಸಮಾಜದ ಆರೋಗ್ಯದ ಮೂಲಾಧಾರವಾಗಿದ್ದು, ಯುವತಿಯರಲ್ಲಿ ಋತುಚಕ್ರ, ಪೌಷ್ಟಿಕ ಆಹಾರ ಮತ್ತು ಆರೋಗ್ಯದ ಬಗ್ಗೆ ಸಮರ್ಪಕ ಅರಿವು ಮೂಡಿಸುವುದು ಅತ್ಯಂತ ಅಗತ್ಯ ಎಂದು ಮಾನ್ಯತಾ ಆಸ್ಪತ್ರೆಯ ವೈದ್ಯೆ ಡಾ. ಶ್ವೇತಾ ಶರಣ್ ಹೇಳಿದರು.ಮನು ಸಾಮಾಜಿಕ ಜನಜಾಗೃತಿ ವಿವಿಧೋದ್ದೇಶ ಸಂಸ್ಥೆ ಹಾಗೂ ಎ.ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಜುಲೈ 31ರಂದು ಆಯೋಜಿಸಿದ್ದ “ಸ್ವಸ್ಥ ಮಹಿಳೆ–ಸುಂದರ ಸಮಾಜ” ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಕಾರ್ಯಕ್ರಮವನ್ನು ಖ್ಯಾತ ಚಿನ್ನ-ಬೆಳ್ಳಿ ವ್ಯಾಪಾರಿ ಹಾಗೂ ಸುವರ್ಣಕಾರ…

Read More

ಯಾರೂ ಮತದಾನದ ಹಕ್ಕಿನಿಂದ ವಂಚಿತರಾಗದಿರಲಿ; ಸಮಾಜದ ಪ್ರಮುಖರು ಜಾಗೃತಿ ಮೂಡಿಸಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 19:ಪ್ರತಿಯೊಬ್ಬರಿಗೂ ಮತದಾನದ ಹಕ್ಕು ಅಮೂಲ್ಯವಾಗಿದ್ದು, ಹಿಂದೂ ಸಮಾಜದ ಸಣ್ಣ ಪುಟ್ಟ ಜಾತಿ-ಉಪಜಾತಿಗಳ ಬಾಂಧವರು ತಮ್ಮ ಮತ್ತು ತಮ್ಮ ಕುಟುಂಬದ ಎಲ್ಲ ಸದಸ್ಯರ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ಉಳಿಸಿಕೊಳ್ಳಲು, ತಪ್ಪದೆ ಎಸ್.ಐ.ಆರ್ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು. ಸಮಾಜದ ಪ್ರಮುಖರು ತಮ್ಮ ಕುಲಬಾಂಧವರಿಗೆ ಎಸ್.ಐ.ಆರ್ ಮಹತ್ವದ ಬಗ್ಗೆ ಜಾಗೃತಿ ಮೂಡಿಸಬೇಕು.ಹಿಂದೂ ಸಮಾಜದ ಕಲಾಲ್/ಖಾಟಿಕ್, ಮಡಿವಾಳ (ಅಗಸ), ಹಂದಿಗೊಲ್ಲ/ಹಂದಿಜೋಗಿ, ಭೋವಿ, ಬಂಜಾರಾ, ಗೊಂಧಳಿ, ಕೊರಮ, ಕೊರಚ, ಅಲೆಮಾರಿ ಬುಡಕಟ್ಟು ಜಾತಿಗಳು ಸೇರಿದಂತೆ ವಿವಿಧ ಜಾತಿ ಮತ್ತು ಉಪ ಜಾತಿಗಳ…

Read More

ಅನಿಲ ಪೈಪ್‌ಲೈನ್ ಬಳಿ ಸುರಕ್ಷತೆ ಪಾಲಿಸಿ: ಥಿಂಕ್ ಗ್ಯಾಸ್ ಜಾಗೃತಿ ಅಭಿಯಾನ

ಸಪ್ತಸಾಗರ ವಾರ್ತೆ,ಬಾಗಲಕೋಟೆ, ಜು.2:ಭೂಗತ ಅನಿಲ ಪೈಪ್‌ಲೈನ್‌ಗಳ ಸುರಕ್ಷತೆ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಥಿಂಕ್ ಗ್ಯಾಸ್ ಸಂಸ್ಥೆ ಬಾಗಲಕೋಟೆ ನಗರ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ವಿಶೇಷ ಸುರಕ್ಷತಾ ಜಾಗೃತಿ ಅಭಿಯಾನ ಆರಂಭಿಸಿದೆ.ಅನಿಲ ಪೈಪ್‌ಲೈನ್‌ಗಳ ಸಮೀಪ ಯಾವುದೇ ಉತ್ಖನನ ಕಾರ್ಯ ಕೈಗೊಳ್ಳುವ ಮುನ್ನ ಸಂಬಂಧಿತ ಇಲಾಖೆ ಹಾಗೂ ಥಿಂಕ್ ಗ್ಯಾಸ್ ಸಂಸ್ಥೆಯೊಂದಿಗೆ ಸಮನ್ವಯ ಸಾಧಿಸುವಂತೆ ಸರ್ಕಾರಿ ಇಲಾಖೆ, ಗುತ್ತಿಗೆದಾರರು, ಯುಟಿಲಿಟಿ ಸಂಸ್ಥೆಗಳು ಹಾಗೂ ಖಾಸಗಿ ಉತ್ಖನನ ಏಜೆನ್ಸಿಗಳಿಗೆ ಮನವಿ ಮಾಡಲಾಗಿದೆ. ಅನಧಿಕೃತ ಉತ್ಖನನದಿಂದ ಭೂಗತ ಅನಿಲ…

Read More

ಹಿರಿಯರ ಮೇಲಿನ ದೌರ್ಜನ್ಯ ತಡೆಗೆ ಜಾಗೃತಿ ಅಗತ್ಯ: ತಜ್ಞರ ಅಭಿಮತ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 30:ಹಿರಿಯ ನಾಗರಿಕರ ಮೇಲಿನ ದೌರ್ಜನ್ಯ ತಡೆಗೆ ಕುಟುಂಬದಲ್ಲಿ ಪರಸ್ಪರ ಹೊಂದಾಣಿಕೆ, ಗೌರವ ಮತ್ತು ಸೌಹಾರ್ದಯುತ ವಾತಾವರಣ ನಿರ್ಮಾಣ ಅತ್ಯಗತ್ಯ ಎಂದು ತಜ್ಞರು ಅಭಿಪ್ರಾಯಪಟ್ಟರು.ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ.ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಹಿರಿಯ ನಾಗರಿಕರ ವೈದ್ಯಕೀಯ ವಿಭಾಗದ ವತಿಯಿಂದ ಹಿರಿಯ ನಾಗರಿಕರ ಮೇಲಿನ ದೌರ್ಜನ್ಯ ತಡೆ ಮತ್ತು ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ…

Read More

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ: ಯುವ ಮತದಾರರಲ್ಲಿ ಜಾಗೃತಿ ಮೂಡಿಸಿದ ಬೃಹತ್ ಜಾಥಾ

ಸಪ್ತಸಾಗರ ವಾರ್ತೆ,ವಿಜಯಪುರ ಜೂ. 29:ಮತದಾರರ ಪಟ್ಟಿಯು ಪ್ರಜಾಪ್ರಭುತ್ವದ ಮೂಲ ಆಧಾರವಾಗಿದ್ದು, ಅರ್ಹ ಮತದಾರರ ಹೆಸರು ಪಟ್ಟಿಯಲ್ಲಿ ಸೇರ್ಪಡೆಯಾಗುವುದು ಅತ್ಯಂತ ಮಹತ್ವದ್ದಾಗಿದೆ. ಈ ಹಿನ್ನೆಲೆಯಲ್ಲಿ ಯುವಜನತೆ ಸೇರಿದಂತೆ ಸಾರ್ವಜನಿಕರಲ್ಲಿ ಮತದಾರರ ನೋಂದಣಿ, ಹೆಸರು ಪರಿಶೀಲನೆ, ತಿದ್ದುಪಡಿ ಹಾಗೂ ಮತದಾನದ ಹಕ್ಕಿನ ಮಹತ್ವದ ಕುರಿತು ಅರಿವು ಮೂಡಿಸಲು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದುಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ರಿಷಿ ಆನಂದ ಅವರು ಹೇಳಿದರು.ನಗರದ ಸರ್ಕಾರಿ…

Read More

ಅಭಿವೃದ್ಧಿ ಯೋಜನೆಗಳ ಕುರಿತು ಜಾಗೃತಿ ಮೂಡಿಸುವುದು ಪತ್ರಕರ್ತರ ಆದ್ಯ ಕರ್ತವ್ಯ-ಅಶೋಕ ಯಡಳ್ಳಿ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 11:ಮಕ್ಕಳ ಆರೋಗ್ಯ, ಶಿಕ್ಷಣ, ಸುರಕ್ಷತೆ ಮತ್ತಿತರ ಅಭಿವೃದ್ಧಿ ಯೋಜನೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಪತ್ರಕರ್ತರ ಆದ್ಯ ಕರ್ತವ್ಯವಾಗಿದೆ. ಆದ್ದರಿಂದ ಪತ್ರಕರ್ತರು ಮಕ್ಕಳು ಹಾಗೂ ಸಮಾಜದ ಹಿತದೃಷ್ಟಿಯಿಂದ ಅಭಿವೃದ್ಧಿ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾಧ್ಯಕ್ಷ ಅಶೋಕ ಯಡಳ್ಳಿ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ, ಹಾಗೂ ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗವು ಹೈದರಾಬಾದ್‌ನ ಯುನಿಸೆಫ್ ಸಹಯೋಗದಲ್ಲಿ ಬುಧವಾರ…

Read More

ಮೇ 8ರಂದು ಬೃಹತ್ ರೈತ ಜನಜಾಗೃತಿ ಸಮಾವೇಶ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 2 :ವಿಜಯಪುರದಲ್ಲಿ ಮೇ. 8ರಂದು ದರಬಾರ ಹೈಸ್ಕೂಲ್ ಮೈದಾನದಲ್ಲಿ ಬೃಹತ್ ರೈತ ಜನಜಾಗೃತಿ ಸಮಾವೇಶ ಸಂಘಟಿಸಲಾಗಿದ್ದು, ಆಲಮಟ್ಟಿಯ ಲಾಲ್ ಬಹೂದ್ದೂರ ಶಾಸ್ತ್ರಿ ಆಣೆಕಟ್ಟನ್ನು 519.60 ಮೀಟರದಿಂದ 524.256 ಮೀಟರ್ ಕ್ಕೆ ಎತ್ತರಿಸಿ ಅದಕ್ಕೆ ಬೇಕಾಗುವ ಸಂಪೂರ್ಣ ಭೂ ಪರಿಹಾರ, ಪುನರ್ ವಸತಿ, ಕಲ್ಪಿಸಿ 5 ಜಿಲ್ಲೆಗಳಿಗೆ ಸಮಗ್ರ ನೀರಾವರಿ ಮಾಡುವುದು ಹಾಗೂ ಮುಳವಾಡ ಸೇರಿದಂತೆ ವಿವಿಧ ಏತ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವುದು ಸೇರಿದಂತೆ ಅನೇಕ ಹಕ್ಕೊತ್ತಾಯಗಳನ್ನು ಮಂಡಿಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ…

Read More

ಜ್ಞಾನ-ಪರಿಜ್ಞಾನ ಇದ್ದಾಗ ಮಾತ್ರ ಪತ್ರಕರ್ತ ಯಶಸ್ಸು ಗಳಿಸಲು ಸಾಧ್ಯ: ಸಂತೋಷ ಚಿನಗುಡಿ

ಸಪ್ತಸಾಗರ ವಾರ್ತೆ,ವಿಜಯಪುರ, ಎ. 3: ಪತ್ರಕರ್ತನಿಗೆ ಜ್ಞಾನ ಮತ್ತು ಪರಿಜ್ಞಾನ ಇದ್ದಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂದು ಪ್ರಜಾವಾಣಿಯ ಬೆಳಗಾವಿ ಜಿಲ್ಲಾ ಹಿರಿಯ ವರದಿಗಾರ ಸಂತೋಷ ಚಿನಗುಡಿ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವುಮನ್ ಮೀಡಿಯಾ ಕ್ಲಬ್ ಉದ್ಘಾಟಿಸಿ ಅವರು ಮಾತನಾಡಿದರು.ಪತ್ರಿಕೋದ್ಯಮವು ಕೇವಲ ತರಗತಿ ಕೋಣೆಗೆ ಸೀಮಿತವಾಗಿರದೆ, ವಿದ್ಯಾರ್ಥಿಗಳು ಪ್ರಾಯೋಗಿಕ ಜ್ಞಾನವನ್ನು ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ. ಪತ್ರಿಕೆಗಳನ್ನು ಕೇವಲ ನೋಡದೆ, ಅವನ್ನು ನಿಯಮಿತವಾಗಿ ಓದಿದಾಗ…

Read More

ಧೂಮಪಾನ ನಿಷೇಧಕ್ಕೆ ಜನರ ಸ್ವಯಂ ಜಾಗೃತಿ ಅತ್ಯಗತ್ಯ- ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ಇಂಡಿ, ಮಾ. 11: ಧೂಮಪಾನವು ಗಂಭೀರ ವ್ಯಸನವಾಗಿದ್ದು, ಇದು ವ್ಯಕ್ತಿಯ ಆರೋಗ್ಯ, ಸುತ್ತಲಿನ ಪರಿಸರದ ಮೇಲೆ ಹಾನಿಕಾರಕ ಪರಿಣಾಮ ಬೀರುತ್ತದೆ. ಧೂಮಪಾನ ಎಂದರೆ ದೇಹತ್ಯಾಗ ಎಂದರಿತುಕೊಂಡು ಆರೋಗ್ಯಕರ ಜೀವನಕ್ಕಾಗಿ ಎಲ್ಲರೂ ಧೂಮಪಾನದಿಂದ ದೂರವಿರುವುದು ಅತ್ಯಗತ್ಯ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಬುಧವಾರ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಧೂಮಪಾನ ನಿಷೇಧ ದಿನದ ನಿಮಿತ್ತ ಹಮ್ಮಿಕೊಂಡ ಧೂಮಪಾನದ ದುಷ್ಪರಿಣಾಮ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಧೂಮಪಾನವು ನಿಧಾನಗತಿಯ ವಿಷವಾಗಿದೆ. ಅದು ಶ್ವಾಸಕೋಶದ ಕ್ಯಾನ್ಸರ್, ಹೃದಯರಕ್ತನಾಳದ ಕಾಯಿಲೆ,…

Read More

ಪ್ರತಿಯೊಬ್ಬರಿಗೂ ಧರ್ಮ ಪ್ರಜ್ಞೆ ಮುಖ್ಯ-ಉಜ್ಜಯಿನಿ ಜಗದ್ಗುರು ಶ್ರೀಗಳು

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 15:ಬದುಕಿನಲ್ಲಿ ಭಗವಂತನನ್ನು ಮರೆಯದಿರಿ. ಪ್ರೀತಿ-ಕರುಣೆಯೇ ನಿಜವಾದ ಧರ್ಮ. ಬದುಕಿನಲ್ಲಿ ಗಳಿಸುವುದನ್ನು ಕಲಿತಂತೆ ಬದುಕುವುದನ್ನು ಕಲಿಯಬೇಕಾದರೆ ಪ್ರತಿಯೊಬ್ಬರಿಗೂ ಧರ್ಮ ಪ್ರಜ್ಞೆ ಮುಖ್ಯ ಎಂದು ಉಜ್ಜಯಿನಿ ಜಗದ್ಗುರು ಶ್ರೀ ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯರು ಹೇಳಿದರು.ರವಿವಾರ ತಾಲೂಕಿನ ನಾಗಠಾಣ ಗ್ರಾಮದ ಉದಯಲಿಂಗೇಶ್ವರ ಹಿರೇಮಠದಲ್ಲಿ ಮಹಾಶಿವರಾತ್ರಿ ನಿಮಿತ್ತ ಉದಯಲಿಂಗೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡ ಧರ್ಮಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ಜನಮನವನ್ನು ನಿತ್ಯವೂ ಹಸನುಗೊಳಿಸುತ್ತಾ ನಿತ್ಯ ನೂತನ ಬದುಕಿಗೆ ಕಾರಣವಾಗಿ ನೀತಿ-ನಿಯಮ ಪಾಲನೆಗೆ ಉನ್ನತ ಜೀವನ ಮೌಲ್ಯಗಳಿಗೆ ಸದಾ…

Read More