ಡಾ. ಕಡ್ಲಿಮಟ್ಟಿಯವರಿಗೆ ಅತ್ಯುತ್ತಮ ಆಯುರ್ವೇದ ವೈದ್ಯ ಪ್ರಶಸ್ತಿ
ಸಪ್ತಸಾಗರ ವಾರ್ತೆ,ವಿಜಯಪುರ, ಜು. 2: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದಲ್ಲಿರುವ ನಗರ ಆರೋಗ್ಯ ಕೇಂದ್ರ ಮತ್ತು ಹೈಟೆಕ್ ಆಯುರ್ವೇದ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಂಜಯ ಕಡ್ಲಿಮಟ್ಟಿ ಅವರಿಗೆ ಅತ್ಯುತ್ತಮ ಆಯುರ್ವೇದ ವೈದ್ಯ ಪ್ರಶಸ್ತಿ ಲಭಿಸಿದೆ.ಮೈಸೂರಿನಲ್ಲಿ ಬುಧವಾರ ರಾಷ್ಟ್ರೀಯ ವೈದ್ಯರ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಜೆ.ಎಸ್.ಎಸ್ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಈ ಪ್ರಶಸ್ತಿ ನೀಡಿ ಗೌರವಿಸಿದೆ.ಆಯುರ್ವೇದ ವೈದ್ಯಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಅತ್ಯುತ್ತಮ ಸೇವೆಗಾಗಿ ಈ ಪ್ರಶಸ್ತಿಯನ್ನು ಜೆ.ಎಸ್.ಎಸ್ ಮಹಾವಿದ್ಯಾಪೀಠದ…


