ನಾಳೆ ವಿಜಯಪುರ- ಬಬಲೇಶ್ವರ ಎರಡು ಬಸ್ಸುಗಳ ಸೇವೆ ಆರಂಭ

ಸಪ್ತಸಾಗರ ವಾರ್ತೆ ವಿಜಯಪುರ, ಆ. 25: ನಾಳೆ ಮಂಗಳವಾರದಿಂದ ವಿಜಯಪುರ- ಬಬಲೇಶ್ವರ ಮತ್ತು ಬಬಲೇಶ್ವರ- ವಿಜಯಪುರ ಮಧ್ಯೆ ಸಾಮಾನ್ಯ ಸಾರಿಗೆ ಎರಡು ಬಸ್ಸುಗಳ ಸೇವೆ ಪ್ರಾರಂಭವಾಗಲಿದೆ.ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರ ಸೂಚನೆ ಮೇರೆಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಪ್ರತಿದಿನ‌ ಸಾರಿಗೆ ಎರಡು ಬಸ್ಸುಗಳನ್ನು ಈ ಮಾರ್ಗದಲ್ಲಿ ಓಡಿಸಲಿದೆ. ಒಂದು ಬಸ್ಸು ವಿಜಯಪುರ- ಖತಿಜಾಪುರ- ಸಾರವಾಡ ಮಾರ್ಗವಾಗಿ ಬಬಲೇಶ್ವರಕ್ಕೆ ಸಂಚರಿಸಿದರೆ ಮತ್ತೊಂದು ಬಸ್ಸು ಬಬಲೇಶ್ವರ- ಸಾರವಾಡ-…

Read More

ಅರ್ಜುಣಗಿಯಲ್ಲಿ ರೈತ ಆತ್ಮಹತ್ಯೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 22:ಸಾಲಬಾಧೆಯಿಂದ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದಲ್ಲಿ ನಡೆದಿದೆ.ಶಿವಾಜಿ ಘೋಲಫ (56) ನೇಣಿಗೆ ಶರಣಾದ ರೈತ.ಕೆಬಿಜಿ ಬ್ಯಾಂಕ್ ನಲ್ಲಿ 3 ಲಕ್ಷ ಸಾಲ,ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿಯೂ ಸಾಲ ಮಾಡಿದ್ದ. ಖಾಸಗಿಯವರ ಕಡೆಗೂ ರೈತ ಶಿವಾಜಿ ಸಾಲ ಮಾಡಿದ್ದ.ರೈತ ಶಿವಾಜಿ ತನ್ನ ಜಮೀನಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಜು. 18ರಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಪ್ರವಾಸ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 16:ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಜು..18 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.ಅಂದು ಬೆಳಗ್ಗೆ 9ಗಂಟೆಗೆ ಸಚಿವರ ಗೃಹ ಕಚೇರಿಯಲ್ಲಿ ದಿ ನ್ಯೂ ಯಾರ್ಕ್ ಟೈಮ್ಸ್ ವರದಿಗಾರರೊಂದಿಗೆ ಸಂದರ್ಶನ ನೀಡಲಿದ್ದಾರೆ.ಮಧ್ಯಾಹ್ನ 12ಗಂಟೆಗೆ ಡಿಸಿಸಿ ಬ್ಯಾಂಕ್ ಹತ್ತಿರ ಆಲಕುಂಟೆ ನಗರದಲ್ಲಿ ಆಯೋಜಿಸಲಾದ ಉತ್ತರ ಕರ್ನಾಟಕ ಶಾಮಿಯಾನ ಸಂಘದ ವತಿಯಿಂದ 4ನೇ ಮಹಾ ಅಧಿವೇಶನ ಹಾಗೂ ಮಳಿಗೆಗಳ ಪ್ರದರ್ಶನ ಉದ್ಘಾಟನೆಯಲ್ಲಿ ಭಾಗವಹಿಸಲಿದ್ದಾರೆ.ನಂತರ ಮಧ್ಯಾಹ್ನ 3ಗಂಟೆಗೆ ತಿಕೋಟಾ…

Read More

ಹಡಪದ ಅಪ್ಪಣ್ಣನವರ ವಚನಗಳು ಸಾರ್ವಕಾಲಿಕ : ಬಬಲೇಶ್ವರ

ಸಪ್ತಸಾಗರ ವಾರ್ತೆ, ವಿಜಯಪುರ ಜು.10 : ನಿಜಶರಣ ಹಡಪದ ಅಪ್ಪಣ್ಣನವರು ನಮ್ಮ ನಾಡಿನ ಸ್ವತ್ತು ಆಸ್ತಿ ಇದ್ದಂತೆ. ಬಸವಾದಿ ಕಾಲದ ಎಲ್ಲ ಶರಣರು ಸಮ ಸಮಾಜವನ್ನು ನಿರ್ಮಿಸುವಲ್ಲಿ ಬಹಳಷ್ಟು ಶ್ರಮಿಸಿದವರು ಎಂದ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಗುರುವಾರ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶರಣರ…

Read More