ಅಭಿವೃದ್ಧಿಯ ಹಾದಿಯಲ್ಲಿ ವಿಜಯಪುರ; ಧೂಳು-ಕಸದ ನಗರದಿಂದ ಸ್ವಚ್ಛ, ಸುಂದರ ನಗರದೆಡೆಗೆ: ಯತ್ನಾಳ

ರೂ.8.95 ಕೋಟಿ ವೆಚ್ಚದ ಒಳಚರಂಡಿ, ಸಿಸಿ ರಸ್ತೆ ಕಾಮಗಾರಿಗಳಿಗೆ ಚಾಲನೆ ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 30:ಕೆಲ ವರ್ಷಗಳ ಹಿಂದೆ ಹಾಳಾದ ರಸ್ತೆಗಳು, ಎಲ್ಲೆಂದರಲ್ಲಿ ಕಸದ ರಾಶಿ ಹಾಗೂ ಧೂಳಿನಿಂದಾಗಿ ಜನರು ತೊಂದರೆ ಅನುಭವಿಸುತ್ತಿದ್ದ ವಿಜಯಪುರ ನಗರದ ಚಿತ್ರಣ ಇದೀಗ ಸಂಪೂರ್ಣ ಬದಲಾಗಿದೆ. 2018ರಿಂದ ನಗರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳಿಂದಾಗಿ ವಿಜಯಪುರ ಧೂಳು ಮುಕ್ತ ನಗರವಾಗಿ ರೂಪುಗೊಂಡಿದ್ದು, ಅಸ್ತಮಾ ಮುಕ್ತ ನಗರವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.ವಾರ್ಡ್ ನಂ.33ರ ಕೇತನ ನಗರದಲ್ಲಿ…

Read More

‘ನಿಮ್ಮ ಕಷ್ಟದಲ್ಲಿ ಜೊತೆ ನಿಂತವನು ನಾನು; ನಿಮ್ಮ ಬಬಲೇಶ್ವರ ನೀವು ನೋಡಿಕೊಳ್ಳಿ’ ಸಚಿವ ಎಂ.ಬಿ. ಪಾಟೀಲ ವಿರುದ್ಧ ಯತ್ನಾಳ ವಾಗ್ದಾಳಿ

ಸಪ್ತಸಾಗರ ವಾರ್ತೆ ವಿಜಯಪುರ, ಸೆ.29:“ನಾನು ಸಚಿವ ಎಂ.ಬಿ. ಪಾಟೀಲರ ಹಂಗಿನಿಂದ ಶಾಸಕನಾಗಿಲ್ಲ. ನೀವು ಹಿಂದೆ ಸೋತಾಗ ಹಾಗೂ ಬಿಎಲ್‌ಡಿಇ ವಿಷಯದಲ್ಲಿ ತೊಂದರೆ ಅನುಭವಿಸಿದಾಗ ನಿಮ್ಮ ಕಷ್ಟದಲ್ಲಿ ಜೊತೆ ನಿಂತವನು ನಾನು. ಅಭಿವೃದ್ಧಿ ವಿಷಯದಲ್ಲೂ ಸದಾ ಬೆಂಬಲವಾಗಿ ನಿಂತಿದ್ದೇನೆ” ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸಚಿವ ಎಂ.ಬಿ. ಪಾಟೀಲ ವಿರುದ್ಧ ವಾಗ್ದಾಳಿ ನಡೆಸಿದರು.ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನೀವು ಬಬಲೇಶ್ವರವನ್ನು ನೋಡಿಕೊಳ್ಳಿ. ನನಗೆ ಚಾಲೆಂಜ್ ಮಾಡಲು ಬರಬೇಡಿ” ಎಂದು ಸಚಿವ ಎಂ.ಬಿ. ಪಾಟೀಲರಿಗೆ…

Read More

ಪ್ರಾಮಾಣಿಕ ಶ್ರಮಿಕರಿಗೆ ಸಿದ್ಧಸಿರಿ ಕಾಮಧೇನು, ಕಲ್ಪವೃಕ್ಷ: ಯತ್ನಾಳ

ರೂ.6,140 ಕೋಟಿ ಠೇವಣಿ; 2025-26ರಲ್ಲಿ ರೂ.36.99 ಕೋಟಿ ನಿವ್ವಳ ಲಾಭ ಸಪ್ತಸಾಗರ ವಾರ್ತೆ,ವಿಜಯಪುರ, ಸೆ.27:ಜನರ ವಿಶ್ವಾಸ ಮತ್ತು ಗ್ರಾಹಕರ ಸಹಕಾರದಿಂದ ಸಿದ್ಧಸಿರಿ ಮಲ್ಟಿ-ಸ್ಟೇಟ್ ಮಲ್ಟಿ-ಪರ್ಪಸ್ ಕೋ-ಆಪರೇಟಿವ್ ಸೊಸೈಟಿ ರಾಜ್ಯದಲ್ಲೇ ಮುಂಚೂಣಿಯಲ್ಲಿದ್ದು, ಸಂಸ್ಥೆಯ ಒಟ್ಟು ಠೇವಣಿ ರೂ.6,140 ಕೋಟಿಗೆ ತಲುಪಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.ನಗರದ ಕಿತ್ತೂರು ರಾಣಿ ಚೆನ್ನಮ್ಮ ಮಂಗಲ ಕಾರ್ಯಾಲಯದಲ್ಲಿ ಭಾನುವಾರ ನಡೆದ ಸಿದ್ಧಸಿರಿ ಮಲ್ಟಿ-ಸ್ಟೇಟ್ ಮಲ್ಟಿ-ಪರ್ಪಸ್ ಕೋ-ಆಪರೇಟಿವ್ ಸೊಸೈಟಿಯ 20ನೇ ವಾರ್ಷಿಕ ಸಾಮಾನ್ಯ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.ಸಿದ್ಧಸಿರಿ ಒಂದು…

Read More

‘ಯತ್ನಾಳ ಬಾಯಿಗೆ ಬಂದಂತೆ ಮಾತನಾಡುವುದನ್ನು ನಿಲ್ಲಿಸಲಿ’

ಸಿದ್ದರಾಮಯ್ಯ ನಮ್ಮ ನಾಯಕರು; ಸಹಿ ಸಂಗ್ರಹದ ಆರೋಪ ಸುಳ್ಳು: ಎಂ.ಬಿ. ಪಾಟೀಲ್ ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 14:ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಾಯಿಸಲು ಜಮೀರ್ ಅಹ್ಮದ್ ಖಾನ್, ಸತೀಶ ಜಾರಕಿಹೊಳಿ ಹಾಗೂ ತಾವು ವಿರೋಧ ವ್ಯಕ್ತಪಡಿಸಿದ್ದೇವೆ. ಸಿದ್ದರಾಮಯ್ಯ ಅವರಿಗೆ ಬೆಂಬಲ ನೀಡದೇ 36 ಶಾಸಕರ ಸಹಿ ಸಂಗ್ರಹಿಸಲಾಗಿದೆ ಎಂಬ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಹೇಳಿಕೆ ಸಂಪೂರ್ಣ ಸುಳ್ಳು ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ತಿರುಗೇಟು ನೀಡಿದರು.ವಿಜಯಪುರ ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ…

Read More

ತಾಜಬಾವಡಿ ಬಳಿ ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ : ಎರಡು ವರ್ಷದಲ್ಲಿ ಕೇಂದ್ರ ಕಾರಾಗೃಹದ ಬಳಿ 4 ಎಕರೆ ಪ್ರದೇಶದಲ್ಲಿ ಬೃಹತ್ ಹೊಂಡ ನಿರ್ಮಾಣ: ಯತ್ನಾಳ

ಸಪ್ತಸಾಗರ ವಾರ್ತೆ,ವಿಜಯಪುರ, ಸೆ.11: ತಾಜಬಾವಡಿ ಬಳಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಿಸುವುದರ ಜೊತೆಗೆ, ಮುಂದಿನ ಎರಡು ವರ್ಷಗಳಲ್ಲಿ ಕೇಂದ್ರ ಕಾರಾಗೃಹದ ಸಮೀಪ ಸುಮಾರು ನಾಲ್ಕು ಎಕರೆ ಜಮೀನಿನಲ್ಲಿ ಬೃಹತ್ ಗಣೇಶ ವಿಸರ್ಜನಾ ಹೊಂಡ ನಿರ್ಮಿಸಲಾಗುವುದು ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.ನಗರದ ಸಿದ್ದೇಶ್ವರ ದೇವಸ್ಥಾನ ಆವರಣದ ಶ್ರೀ ಶಿವಾನುಭವ ಮಂಟಪದಲ್ಲಿ ಸೋಮವಾರ ಸ್ವಾಮಿ ವಿವೇಕಾನಂದ ಸೇನೆಯ ಶ್ರೀ ಗಜಾನನ ಮಹಾಮಂಡಳ ವತಿಯಿಂದ ಆಯೋಜಿಸಿದ್ದ ನಗರದ ಎಲ್ಲ ಗಣೇಶ ಮಂಡಳಿಗಳ ಪೂರ್ವಭಾವಿ ಸಭೆಯನ್ನು…

Read More

ರೂ.5.43 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಯತ್ನಾಳ ಭೂಮಿಪೂಜೆ : ರಸ್ತೆ, ಚರಂಡಿ ಅಭಿವೃದ್ಧಿಗೆ ಆದ್ಯತೆ; ಸ್ಥಳೀಯರ ಅಹವಾಲು ಆಲಿಸಿದ ಶಾಸಕ

ಸಪ್ತಸಾಗರ ವಾರ್ತೆ,ವಿಜಯಪುರ, ಆ.11:ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯ 2ನೇ ಹಂತದಲ್ಲಿ ಮಂಜೂರಾದ ರೂ.5.43 ಕೋಟಿ ಅನುದಾನದಲ್ಲಿ ನಗರದ ವಿವಿಧ ವಾರ್ಡ್‌ಗಳಲ್ಲಿ ರಸ್ತೆ, ಒಳಚರಂಡಿ ಹಾಗೂ ಉದ್ಯಾನವನ ಅಭಿವೃದ್ಧಿ ಕಾಮಗಾರಿಗಳಿಗೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸೋಮವಾರ ಭೂಮಿಪೂಜೆ ನೆರವೇರಿಸಿದರು. ವಿವಿಧ ಕಾಮಗಾರಿ ಸ್ಥಳಗಳಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಸಮಸ್ಯೆಗಳ ಪರಿಹಾರಕ್ಕೆ ಸ್ಪಂದಿಸುವ ಭರವಸೆ ನೀಡಿದರು.ವಾರ್ಡ್‌ ನಂ.2ರ ಅಪ್ಜಲಪುರ ಟಕ್ಕೆಯಲ್ಲಿ ರೂ.2 ಕೋಟಿ ವೆಚ್ಚದಲ್ಲಿ ಒಳಚರಂಡಿ ಹಾಗೂ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ, ಕಂಜರ ಬಾಟರ…

Read More

ಕಾವೇರಿ ನೀರು: ರೈತರ ಹಿತ ಕಾಪಾಡಲು ಸರ್ಕಾರ ದೃಢ ನಿಲುವು ತಾಳಲಿ

ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಒತ್ತಾಯ ಸಪ್ತಸಾಗರ ವಾರ್ತೆ,ವಿಜಯಪುರ, ಜು. 30:ಕಾವೇರಿ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರೈತರ ಹಿತಾಸಕ್ತಿಯನ್ನು ಮೊದಲ ಆದ್ಯತೆಯಾಗಿ ಪರಿಗಣಿಸಿ ದೃಢ ನಿಲುವು ತಾಳಬೇಕು ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಎಕ್ಸ್ ನಲ್ಲಿ ಆಗ್ರಹಿಸಿದ್ದಾರೆ.“ರೋಮ್ ಹೊತ್ತಿ ಉರಿಯುವಾಗ ದೊರೆ ನೀರೋ ಪಿಟೀಲು ಬಾರಿಸುತ್ತಿದ್ದ” ಎಂಬ ಮಾತನ್ನು ಉಲ್ಲೇಖಿಸಿದ ಯತ್ನಾಳ್, ಕಾವೇರಿ ನೀರಿನ ಸಮಸ್ಯೆ ತೀವ್ರವಾಗಿರುವ ಸಂದರ್ಭದಲ್ಲಿಯೂ ಮುಖ್ಯಮಂತ್ರಿ ದೆಹಲಿ ಪ್ರವಾಸ ಹಾಗೂ…

Read More

ಸಚಿವ ಸಂಪುಟ ವಿಳಂಬಕ್ಕೆ ಸಿಎಂ ವಿರುದ್ಧ ಯತ್ನಾಳ ತೀವ್ರ ವಾಗ್ದಾಳಿ

‘ಎಲ್ಲ ಇಲಾಖೆಗಳನ್ನೂ ತಮ್ಮ ಬಳಿಯೇ ಇಟ್ಟುಕೊಳ್ಳಲು ಸಂಪುಟ ವಿಸ್ತರಣೆ ಮುಂದೂಡುತ್ತಿದ್ದಾರೆ; ಬರದ ನಡುವೆಯೂ ಕೃಷಿ ಸಚಿವರಿಲ್ಲ‘ ಸಪ್ತಸಾಗರ ವಾರ್ತೆ,ವಿಜಯಪುರ, ಜು. 29:ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಆಗುತ್ತಿರುವ ವಿಳಂಬದ ವಿರುದ್ಧ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ತೀವ್ರ ವಾಗ್ದಾಳಿ ನಡೆಸಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ದೇಶಪೂರ್ವಕವಾಗಿಯೇ ಸಂಪುಟ ವಿಸ್ತರಣೆಯನ್ನು ಮುಂದೂಡುತ್ತಿದ್ದಾರೆ ಎಂದು ಆರೋಪಿಸಿದರು.ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಚಿವ ಸಂಪುಟ ವಿಸ್ತರಣೆಯನ್ನು ವಿಳಂಬಗೊಳಿಸುತ್ತಾ ಹೋದರೆ ಹೆಚ್ಚಿನ ಇಲಾಖೆಗಳು…

Read More

ಆನ್‌ಲೈನ್ ದ್ರಾಕ್ಷಿ ವ್ಯಾಪಾರಕ್ಕೆ ಯತ್ನಾಳ್ ಒತ್ತು

ವಾರಕ್ಕೆ ಎರಡು ದಿನ ಕಡ್ಡಾಯ ಇ-ಟ್ರೇಡಿಂಗ್; ರೈತರ ಹಿತಕ್ಕಾಗಿ ಸರ್ವಾನುಮತದ ನಿರ್ಣಯ ಸಪ್ತಸಾಗರ ವಾರ್ತೆ,ವಿಜಯಪುರ, ಜು. 28:ದ್ರಾಕ್ಷಿ ಬೆಳೆಗಾರರಿಗೆ ಪಾರದರ್ಶಕ ಹಾಗೂ ನ್ಯಾಯಸಮ್ಮತ ವಹಿವಾಟು ಒದಗಿಸುವ ಉದ್ದೇಶದಿಂದ ವಾರದಲ್ಲಿ ಎರಡು ದಿನ ಕಡ್ಡಾಯವಾಗಿ ಆನ್‌ಲೈನ್ ಟ್ರೇಡಿಂಗ್ ವ್ಯವಸ್ಥೆಯಲ್ಲೇ ಒಣ ದ್ರಾಕ್ಷಿ ವ್ಯಾಪಾರ ನಡೆಸಬೇಕು ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಎಪಿಎಂಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಆವರಣದಲ್ಲಿ ಮಂಗಳವಾರ ನಡೆದ ದ್ರಾಕ್ಷಿ ಬೆಳೆಗಾರರ ಸಭೆಯಲ್ಲಿ ಮಾತನಾಡಿದ ಅವರು,…

Read More

ಲಿಫ್ಟ್ ಆಪರೇಟರ್ ಹುದ್ದೆಗಳಿಗೆ ಅಂಗವಿಕಲರ ನೇಮಕಕ್ಕೆ ವಿಡಿಎ ಅನುಮೋದನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 20 :ಲಿಫ್ಟ್ ಆಪರೇಟರ್ ಹುದ್ದೆಗಳಿಗೆ ಕಡ್ಡಾಯವಾಗಿ ಅಂಗವಿಕಲರನ್ನು ನೇಮಿಸಬೇಕು ಎಂದು ವಿಧಾನ ಪರಿಷತ್ ಶಾಸಕ ಸುನೀಲಗೌಡ ಮಾಡಿದ ಪ್ರಸ್ತಾವಕ್ಕೆ ನಗರಾಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಯಿತು.ಸೋಮವಾರ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಸುನೀಲಗೌಡ ಪಾಟೀಲ, ಮುಂಬರುವ ವಿಧಾನ ಪರಿಷತ ಅಧಿವೇಶನದಲ್ಲಿಯೂ ಈ ಕುರಿತು ಸರಕಾರಕ್ಕೆ ಮನವಿ ಮಾಡುವುದಾಗಿ ತಿಳಿಸಿದರು.ವಸತಿ ಸಮುಚ್ಛಯಗಳು, ವಾಣಿಜ್ಯ ಸಂಕೀರ್ಣಗಳು, ಆಸ್ಪತ್ರೆಗಳು, ಮಾಲ್ ಗಳು ಸೇರಿದಂತೆ ಬಹುಮಹಡಿ ಕಟ್ಟಡಗಳಲ್ಲಿ ಲಿಫ್ಟ್ ಬಳಸಲಾಗುತ್ತದೆ. ಈ ಲಿಪ್ಟ್ ಆಪರೇಟರ್ ಹುದ್ದೆಗಳಿಗೆ ಕಡ್ಡಾಯವಾಗಿ…

Read More