
ಗುಣಮಟ್ಟದ ಸೇವೆ ನೀಡುವಲ್ಲಿ ಬಿ ಎಲ್ ಡಿ ಇ ಆಸ್ಪತ್ರೆ ಮುಂಚೂಣಿಯಲ್ಲಿ: ಬಸನಗೌಡ ಪಾಟೀಲ
ಸಪ್ತ ಸಾಗರ ವಾರ್ತೆ ವಿಜಯಪುರ, ಸೆ. 17: ಬಿ.ಎಲ್.ಡಿ.ಇ ಆಸ್ಪತ್ರೆ ಬಡವರು ಮತ್ತು ಮಹಿಳೆಯರಿಗೆ ಗುಣಮಟ್ಟದ ಸೇವೆ ನೀಡುವಲ್ಲಿ ಮುಂಚೂಣಿಯಲ್ಲಿದೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಾಧಿಪತಿ ಬಸನಗೌಡ ಎಂ. ಪಾಟೀಲ ಹೇಳಿದ್ದಾರೆ.ಬುಧವಾರ ನಗರದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿವಿಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನದ ಅಡಿಯಲ್ಲಿ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಗರ್ಭಿಣಿ ಮಹಿಳೆಯರಿಗೆ ಉಚಿತವಾಗಿ…