ಬಸವನ ಬಾಗೇವಾಡಿಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ
ಸಪ್ತಸಾಗರ ವಾರ್ತೆ, ಬಸವನಬಾಗೇವಾಡಿ, ಆ. 22:ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಯಂ ಉಪನ್ಯಾಸಕರ, ಅರ್ಹ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳುವಂತೆ ಆಗ್ರಹಿಸಿ ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಬಸವೇಶ್ವರ ವೃತ್ತದ ವರೆಗೆ ಎಬಿವಿಪಿ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.ಅನಂತರ ಬಸವನ ಬಾಗೇವಾಡಿ ತಹಸೀಲ್ದಾರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.ಎಬಿವಿಪಿಯ ರಾಜ್ಯ ಕಾರ್ಯದರ್ಶಿ ಸಚಿನ ಕುಳಗೇರಿ ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ ಕಾಲೇಜು ಶಿಕ್ಷಣ ಇಲಾಖೆ ಅಡಿಯಲ್ಲಿ ಬರುವ 432 ಪದವಿ ಕಾಲೇಜುಗಳಲ್ಲಿ 6,000 ಕಾಯಂ…


