ಕಲಬುರಗಿ ಎಪಿಎಂಸಿ ಕೃಷಿ ಉತ್ಪನ್ನೇತರ ಅಂಗಡಿ ತೆರವಿಗೆ ಸಚಿವರಿಗೆ ಮನವಿಧರಣಿ ಹೋರಾಟ ಕೈಬಿಡುವಂತೆ ಮನವೊಲಿಸಿದ ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 11 :ಕಲಬುರಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದಲ್ಲಿ ಕೃಷಿ ಉತ್ಪನ್ನ ವಹಿವಾಟಿನ‌ ಹೊರತಾದ ಅಂಗಡಿಗಳ ವ್ಯಾಪಾರಿಗಳನ್ನು ತೆರವುಗೊಳಿಸುವಂತೆ ಕಲಬುರಗಿಯ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ನಿಯೋಗ ಕೃಷಿ ಮಾರುಕಟ್ಟೆ, ಜವಳಿ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ಅವರಿಗೆ ಮನವಿ ಸಲ್ಲಿಸಿತು.ಶುಕ್ರವಾರ ಸಚಿವರ ತವರು ಕ್ಷೇತ್ರದ ಬಸವನಬಾಗೇವಾಡಿ ಪಟ್ಟಣದಲ್ಲಿ ಸಂಘಟನೆಯ ಅಧ್ಯಕ್ಷ ಎಂ.ಎಸ್.ಪಾಟೀಲ ನರಿಬೋಳ ನೇತೃತ್ವದ ನಿಯೋಗದಲ್ಲಿ ಬಂದು ಸಚಿವ ಶಿವಾನಂದ ಪಾಟೀಲ ಅವರನ್ನು…

Read More

ಮನಗೂಳಿ ಕ್ಯಾನರಾ ಬ್ಯಾಂಕ್ ಕಳ್ಳತನ ಪ್ರಕರಣ: ಮತ್ತೆ 12 ಜನರ ಬಂಧನ, 39 ಕೆಜಿ ಬಂಗಾರ ಹಾಗೂ 1.16 ಕೋಟಿ ನಗದು ಜಫ್ತು

ಸಪ್ತಸಾಗರ ವಾರ್ತೆ ವಿಜಯಪುರ, ಜು. 11: ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಮನಗೂಳಿ ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 12 ಜನರನ್ನು ಬಂಧಿಸಲಾಗಿದ್ದು, ಇದುವರೆಗೆ ಬಂದಿದ್ದರ ಸಂಖ್ಯೆ 15ಕ್ಕೇರಿದೆ ಎಂದು ಬೆಳಗಾವಿ ಉತ್ತರ ವಲಯ ಐಜಿಪಿ ಚೇತನಕುಮಾರ ರಾಠೋಡ ತಿಳಿಸಿದ್ದಾರೆ.ಶುಕ್ರವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈಗಾಗಲೇ ಪೊಲೀಸರು 3 ಆರೋಪಿಗಳನ್ನು ಬಂಧಿಸಿದ್ದಾರೆ. ಅವರು ನೀಡಿದ ಮಾಹಿತಿಯನ್ನು ಆಧರಿಸಿಪ್ರಕರಣದ ಮತ್ತೆ 12 ಜನ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.ಮೇ 25ರಂದು ಮನಗೂಳಿ ಕೆನರಾ…

Read More

ಬಸವನ ಬಾಗೇವಾಡಿಯಲ್ಲಿ ಹಡಪದ ಅಪ್ಪಣ್ಣ ಜಯಂತಿ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 10:ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣ ಅವರು ತಮ್ಮ ವಚನಗಳ ಮೂಲಕ ಸಮಾಜ ಸುಧಾರಣೆ ಶ್ರಮಿಸಿದ ಮಹಾನ್ ಶರಣರಾಗಿದ್ದಾರೆ. ಅವರು ವಚನಗಳು ಹಾಗೂ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿದೀಪಗಳಾಗಿವೆ ಎಂದು ರಾಷ್ಟ್ರೀಯ ಬಸವಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಹೇಳಿದರು.ಜಿಲ್ಲೆಯ ಬಸವನ ಬಾಗೇವಾಡಿಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ನಡೆದ ಶಿವಶರಣ ಹಡಪದ ಅಪ್ಪಣ್ಣನವರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.ಹಡಪದ ಅಪ್ಪಣ್ಣ ಅವರು ಸಾಮಾಜಿಕ…

Read More