
ಬಸವಣ್ಣನವರನ್ನು ಒಂದೇ ಸಮಾಜಕ್ಕೆ ಸೀಮಿತಗೊಳಿಸಬೇಡಿ: ಡಿಸಿಎಂ ಡಿ.ಕೆ. ಶಿವಕುಮಾರ
ಸಪ್ತಸಾಗರ ವಾರ್ತೆ,ಬೆಂಗಳೂರು, ಸೆ.7:ಬಸವಣ್ಣನವರನ್ನು ಒಂದೇ ಸಮಾಜಕ್ಕೆ ಸೀಮಿತ ಮಾಡಬಾರದು. ಇವರು ಸರ್ವ ಸಮುದಾಯದ ನಾಯಕ. ನಾಡಿನ ಸಾಂಸ್ಕೃತಿಕ, ಸಾಮಾಜಿಕ ನಾಯಕ. ಆದ ಕಾರಣಕ್ಕೆ ನಮ್ಮ ಸರ್ಕಾರ ಇವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.ರಾಜಾಜಿನಗರದಲ್ಲಿ ಶನಿವಾರ ನಡೆದ ಬಸವಣ್ಣನವರ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದರು.ಮಹಾನ್ ಜ್ಞಾನಿಗಳು, ವಿಜ್ಞಾನಿಗಳು, ಚಿಂತಕರು, ಸಾಹಿತಿಗಳು ಪುಟಗಟ್ಟಲೆ ಹೇಳುವುದನ್ನು ಜನಸಾಮಾನ್ಯರಿಗೆ ಅರ್ಥವಾಗುವಂತೆ ನಾಲ್ಕೈದು ಸಾಲಿನಲ್ಲಿ ತಿಳಿಸಿದ ಮಹಾನ್ ನಾಯಕ ಬಸವಣ್ಣನವರು ಎಂದರು.ಅವರ ಒಂದೊಂದು ವಚನವನ್ನಿಟ್ಟುಕೊಂಡು…