ಭೀಮಾ ನದಿಗೆ ಪ್ರವಾಹ: 8 ಜನರ ರಕ್ಷಣೆ

ರುದ್ರಪ್ಪ ಆಸಂಗಿ ಸಪ್ತಸಾಗರ ವಾರ್ತೆ ವಿಜಯಪುರ, ಸೆ. 27:ಕಳೆದ ಮೂರು ದಿನಗಳಿಂದ ವಿಜಯಪುರ ಜಿಲ್ಲೆಯಲ್ಲಿ ಸತತವಾಗಿ ಧಾರಾಕಾರ ಮಳೆ ಸುರಿಯುತ್ತಿದ್ದು, ಭೀಮಾ ನದಿಗೆ ಪ್ರವಾಹ ಬಂದು ಜನಜೀವನ ಅಸ್ತವ್ಯಸ್ತವಾಗಿದೆ. ತೋಟದ ಜಮೀನಿನಲ್ಲಿ ನೀರು ಸುತ್ತುವರಿದ ಪರಿಣಾಮ ಮಧ್ಯೆದಲ್ಲಿ ಸಿಲುಕಿಕೊಂಡಿದ್ದ ಎಂಟು ಜನರನ್ನು ರಕ್ಷಿಸಲಾಗಿದೆ.ಜಿಲ್ಲೆಯ ಆಲಮೇಲ ತಾಲೂಕಿನ ತಾವರಖೇಡ ಗ್ರಾಮದಲ್ಲಿ ಪ್ರವಾಹ ಉಂಟಾಗಿ ನದಿ ದಂಡೆ ಜಮೀನುಗಳಿಗೆ ನೀರು ನುಗ್ಗಿದೆ. ನೋಡು ನೋಡುತ್ತಿದ್ದಂತೆಯೇತೋಟದ ಮನೆ ಸುತ್ತಮುತ್ತಲಿನ ಪ್ರದೇಶದಲ್ಲಿ ನೀರು ನುಗ್ಗಿ ಸಿಲುಕಿದ್ದ 8 ಜನರನ್ನು ಬೋಟ್ ಬಳಸಿ ರಕ್ಷಣೆ…

Read More

ಭೀಮಾ ನದಿಗೆ ಅಪಾರ ಪ್ರಮಾಣದ ನೀರು: ಪ್ರಭಾವದ ಭೀತಿಯಲ್ಲಿ ಜನರು

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 24:ನೆರೆಯ ಮಹಾರಾಷ್ಟ್ರದಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ಮಹಾರಾಷ್ಟ್ರದ ಉಜನಿ, ವೀರ್ ಜಲಾಶಯಗಳಿಂದ 2 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದು,ಭೀಮಾನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಇದರಿಂದ ನದಿ ದಂಡೆ ಗ್ರಾಮಗಳ ನಿವಾಸಿಗಳಿಗೆ ಪ್ರವಾಹ ಭೀತಿ ಎದುರಾಗಿದೆ.ಚಡಚಣ, ಇಂಡಿ, ಆಲಮೇಲ ತಾಲೂಕಿನ ನದಿ ದಂಡೆ ಗ್ರಾಮದ ಜನತೆಯಲ್ಲಿ ಪ್ರವಾಹದ ಭೀತಿ ಉಂಟಾಗಿದೆ.ಭೀಮಾನದಿಗೆ ಅಡ್ಡಲಾಗಿ ನಿರ್ಮಿಸಿದ ಬ್ರಿಡ್ಜ್ ಕಂ ಬ್ಯಾರೇಜ್ ಗಳು ಜಲಾವೃತವಾಗಿವೆ.ಕರ್ನಾಟಕ, ಮಹಾರಾಷ್ಟ ಸರ್ಕಾರಗಳುಭೀಮಾ ನದಿಗೆ ಅಡ್ಡಲಾಗಿ ಸಮಾನಾಂತರವಾಗಿ ನಿರ್ಮಾಣ…

Read More