ನಾಯಿ ಕಡಿತಕ್ಕೆ ನಿರ್ಲಕ್ಷ್ಯ ಬೇಡ : ಎಚ್ಚರಿಕೆ ಇರಲಿ- ತಕ್ಷಣ ಲಸಿಕೆ ಪಡೆದುಕೊಳ್ಳಿ-ಜಿಲ್ಲಾಧಿಕಾರಿ ಡಾ.ಆನಂದ ಕೆ. ಕರೆ
ಸಪ್ತಸಾಗರ ವಾರ್ತೆ, ವಿಜಯಪುರ ಅ.14: ನಾಯಿ ಕಡಿತಕ್ಕೊಳಗಾದಲ್ಲಿ ಸಾರ್ವಜನಿಕರು ನಿರ್ಲಕ್ಷ್ಯ ವಹಿಸದೇ ಎಚ್ಚರಿಕೆ ವಹಿಸಿ, ತಕ್ಷಣ ಲಸಿಕೆ ಪಡೆದುಕೊಳ್ಳುವ ಮೂಲಕ ರೇಬಿಸ್ ಬಾರದಂತೆ ತಡೆಗಟ್ಟಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಪಶು ಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಕರ್ನಾಟಕ ಪಶುವೈದ್ಯಕೀಯ ಸಂಘ ಹಾಗೂ ಜಿಲ್ಲಾ ಘಟಕ ಇವರ ಸಹಯೋಗದಲ್ಲಿ ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ರೇಬಿಸ್ ತಡೆಗಟ್ಟಲು ಮುಂದಾಗೋಣ ನೀವು-ನಾವು ನಮ್ಮ ಸಮಾಜ ಎಂಬ ಘೋಷವಾಕ್ಯದಡಿ 2025-ರ…


