ಕಬ್ಬು ಬೆಳೆಗಾರರ ಪರ ಬಿಜೆಪಿ; ಅಗತ್ಯಬಿದ್ದರೆ ಹೋರಾಟಕ್ಕೂ ಸಾಥ್: ನಡಹಳ್ಳಿ

ರಾಜ್ಯ ಸರ್ಕಾರದ ವಿರುದ್ಧ ಕಿಡಿ | ರೈತರ ಸಮಸ್ಯೆ ಪರಿಹರಿಸದೆ ಹೋರಾಟದ ಬಗ್ಗೆ ಮೊಸಳೆ ಕಣ್ಣೀರು ಬೇಡ ಸಪ್ತಸಾಗರ ವಾರ್ತೆ,ವಿಜಯಪುರ, ಅ. 15:ಕಬ್ಬು ಬೆಳೆಗಾರರು ಎದುರಿಸುತ್ತಿರುವ ತೂಕ, ರಿಕವರಿ ಹಾಗೂ ಕಟಾವು ಸೇರಿದಂತೆ ವಿವಿಧ ಸಮಸ್ಯೆಗಳಿಗೆ ರಾಜ್ಯ ಸರ್ಕಾರ ತಕ್ಷಣ ಸ್ಪಂದಿಸಬೇಕು. ರೈತರ ನ್ಯಾಯಯುತ ಬೇಡಿಕೆಗಳ ಪೈಕಿ ಶೇ.70ರಷ್ಟು ಬೇಡಿಕೆಗಳನ್ನು ರಾಜ್ಯ ಸರ್ಕಾರವೇ ಈಡೇರಿಸಬೇಕಿದ್ದು, ಸಮಸ್ಯೆಗಳನ್ನು ಬಗೆಹರಿಸದೆ ರೈತರ ಹೋರಾಟದ ಬಗ್ಗೆ ಮೊಸಳೆ ಕಣ್ಣೀರು ಸುರಿಸುವುದು ಸರಿಯಲ್ಲ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ಮಾಜಿ…

Read More

ಬರ ನೆರವು ಸಂಬಂಧ ಸರ್ವಪಕ್ಷ ನಿಯೋಗದ ಜತೆ ದೆಹಲಿಗೆ ಬಾರದಿದ್ದರೆ ಬಿಜೆಪಿಯ ಕಪಟ ನಾಟಕ ಸಾಬೀತು: ಸಿಎಂ ಡಿ ಕೆ ಶಿವಕುಮಾರ್

ಸಪ್ತಸಾಗರ ವಾರ್ತೆ,ಬೆಂಗಳೂರು, ಸೆ. 28: “ರಾಜ್ಯದ ಬರ ಪರಿಸ್ಥಿತಿ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ಸರ್ವಪಕ್ಷ ನಿಯೋಗದೊಂದಿಗೆ ಬಾರದಿದ್ದರೆ, ಬಿಜೆಪಿಯವರದ್ದು ಕಪಟ ನಾಟಕ ಎಂಬುದು ಸಾಬೀತಾಗುತ್ತದೆ. ಕೇಂದ್ರ ಸರ್ಕಾರಕ್ಕೆ ರಾಜ್ಯ ಬಿಜೆಪಿ ನಾಯಕರು ಮನವರಿಕೆ ಮಾಡಿಕೊಡದಿದ್ದರೆ, ರೈತರ ಹಿತಕ್ಕಾಗಿ ನಾವೇ ಅಗತ್ಯ ಕ್ರಮ ತೆಗೆದುಕೊಳ್ಳುತ್ತೇವೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು.ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು‌.ಬರ ವಿಚಾರದಲ್ಲಿ ಸರ್ವಪಕ್ಷ ನಿಯೋಗದೊಂದಿಗೆ ಹೋಗುವುದಿಲ್ಲ ಎಂಬ ಬಿಜೆಪಿ…

Read More

ಅಭಿವೃದ್ಧಿ ಕಾರ್ಯಗಳಿಂದ ಪ್ರೇರಣೆ: ಹೊನವಾಡದ 50ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್‌ಗೆ

ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 1: ಬಬಲೇಶ್ವರ ಮತಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳು ಹಾಗೂ ಜನಪರ ಯೋಜನೆಗಳ ಅನುಷ್ಠಾನದಿಂದ ಪ್ರೇರಿತರಾಗಿ ತಿಕೋಟಾ ತಾಲೂಕಿನ ಹೊನವಾಡ ಗ್ರಾಮದ ಬಿಜೆಪಿಯ 50ಕ್ಕೂ ಹೆಚ್ಚು ಮುಖಂಡರು ಹಾಗೂ ಕಾರ್ಯಕರ್ತರು ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರ ಸಮ್ಮುಖದಲ್ಲಿ ಮಂಗಳವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.ಮುಖಂಡ ಸುನೀಲ ಅವರ ನೇತೃತ್ವದಲ್ಲಿ ಗುರಪ್ಪ ರಂಗಪ್ಪಗೋಳ, ಕೂಸಪ್ಪ ನರಲೆ, ವಿಠ್ಠಲ ತುಪನೂರ, ಸಾವಿತ್ರಿ ಡೇಂಬ್ರಿ, ಸುರೇಖಾ ಡೇಂಬ್ರಿ ಸೇರಿದಂತೆ 50ಕ್ಕೂ ಹೆಚ್ಚು…

Read More

ರಾಹುಲ್ ಗಾಂಧಿ ವಿರುದ್ಧದ ಎಫ್‌ಐಆರ್ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 1: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಉತ್ತರಾಖಂಡ ಪೊಲೀಸರು ದಾಖಲಿಸಿರುವ ಎಫ್‌ಐಆರ್ ಖಂಡಿಸಿ ವಿಜಯಪುರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಮತ್ತು ವಿಜಯಪುರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಎಸ್. ಲೋಣಿ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮನವಿ ಸಲ್ಲಿಸಲಾಯಿತು.ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹಾಲ್ದ್ವಾನಿ ರ‍್ಯಾಲಿ…

Read More

ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹ: ಬಿಜೆಪಿ ಧರಣಿ ಮೂರನೇ ದಿನಕ್ಕೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 20:ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಜಿಲ್ಲಾ ಬಿಜೆಪಿಯಿಂದ ನಗರದಲ್ಲಿ ನಡೆಯುತ್ತಿರುವ ಬೃಹತ್ ಧರಣಿ ಸತ್ಯಾಗ್ರಹ ಗುರುವಾರ ಮೂರನೇ ದಿನಕ್ಕೆ ಕಾಲಿಟ್ಟಿತು.ಬಿಜೆಪಿ ನಗರ ಮಂಡಲದ ನೇತೃತ್ವದಲ್ಲಿ ನಡೆದ ಧರಣಿಯಲ್ಲಿ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಶೆಟ್ಟಿ ಮಾತನಾಡಿ, ಸಿದ್ದರಾಮಯ್ಯ ಅವರ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿರುವುದನ್ನು ಅವರೇ ಒಪ್ಪಿಕೊಂಡಿದ್ದಾರೆ. ಅಂತಹ ಆರೋಪ ಎದುರಿಸಿದ ಬಿ. ನಾಗೇಂದ್ರ ಅವರನ್ನು ಮತ್ತೆ ಸಚಿವರನ್ನಾಗಿ ಮಾಡಿರುವುದು ನಾಚಿಕೆಗೇಡಿನ ಸಂಗತಿ ಎಂದು ಟೀಕಿಸಿದರು.ಜಿಲ್ಲೆಯ ಬರ ಪರಿಸ್ಥಿತಿಯನ್ನು…

Read More

ಪೊಲೀಸ್ ನೇಮಕಾತಿ ಪರೀಕ್ಷೆ ಗೊಂದಲಕ್ಕೆ ಸರ್ಕಾರವೇ ಹೊಣೆ: ಉಸ್ತುವಾರಿ ಸಚಿವರ ರಾಜೀನಾಮೆಗೆ ಬಿಜೆಪಿ ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಆ.2: ತಿಕೋಟಾದಲ್ಲಿ ನಡೆದ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷೆಯ ಅವ್ಯವಸ್ಥೆ ಹಾಗೂ ಪ್ರತಿಭಟನಾ ನಿರತ ಅಭ್ಯರ್ಥಿಗಳ ಮೇಲೆ ನಡೆದಿರುವುದಾಗಿ ಆರೋಪಿಸಲಾದ ಲಾಠಿ ಪ್ರಹಾರ ಪ್ರಕರಣ ರಾಜ್ಯ ಸರ್ಕಾರದ ಆಡಳಿತ ವೈಫಲ್ಯದ ಪ್ರತೀಕವಾಗಿದೆ ಎಂದು ಬಿಜೆಪಿ ಮುಖಂಡರು ಆರೋಪಿಸಿದರು. ಈ ಘಟನೆಗೆ ನೈತಿಕ ಹೊಣೆ ಹೊತ್ತು ಜಿಲ್ಲಾ ಉಸ್ತುವಾರಿ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಾವಯವ ಬೀಜ ಪ್ರಮಾಣನ ಸಂಸ್ಥೆಯ ಮಾಜಿ ಅಧ್ಯಕ್ಷ ವಿಜುಗೌಡ ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವರು…

Read More

ಮತದಾರರ ಪಟ್ಟಿ ಪರಿಷ್ಕರಣೆಗೆ ಬಿಜೆಪಿ ಸಕ್ರಿಯ ಸಹಕಾರ: ಸಂದೀಪ ಪಾಟೀಲ

ಸಪ್ತಸಾಗರ ವಾರ್ತೆ,ವಿಜಯಪುರ, ಆ.1: ನಗರದಲ್ಲಿ ದೋಷರಹಿತ ಹಾಗೂ ಪಾರದರ್ಶಕ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವ ಚುನಾವಣಾ ಆಯೋಗದ ಎಸ್‌ಐಆರ್ (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆಗೆ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಬಿಜೆಪಿ ನಗರ ಘಟಕದ ಅಧ್ಯಕ್ಷ ಸಂದೀಪ ಪಾಟೀಲ ಹೇಳಿದರು.ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರ ನಗರದಲ್ಲಿ ಒಟ್ಟು 2,90,479 ಮತದಾರರಿದ್ದು, ಈ ಪೈಕಿ 2,04,368 ಮತದಾರರ ಮಾಹಿತಿಯನ್ನು ಡಿಜಿಟೈಸೇಶನ್ ಮಾಡಲಾಗಿದೆ. ಇದುವರೆಗೆ ಶೇ.70.35ರಷ್ಟು ಕಾರ್ಯ…

Read More

ಕಾನೂನು ಸುವ್ಯವಸ್ಥೆ ಕುಸಿತ ಆರೋಪ: ವಿಜಯಪುರದಲ್ಲಿ ಬಿಜೆಪಿ ಬೃಹತ್ ರ‍್ಯಾಲಿ

ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಕೆ ಸಪ್ತಸಾಗರ ವಾರ್ತೆ,ವಿಜಯಪುರ, ಜು. 24:ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಆರೋಪಿಸಿ, ರಾಜ್ಯಪಾಲರು ಮಧ್ಯಪ್ರವೇಶಿಸಿ ರಾಜ್ಯ ಸರ್ಕಾರಕ್ಕೆ ಅಗತ್ಯ ನಿರ್ದೇಶನ ನೀಡಬೇಕೆಂದು ಆಗ್ರಹಿಸಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಿಲ್ಲಾ ಘಟಕದ ನೇತೃತ್ವದಲ್ಲಿ ಶುಕ್ರವಾರ ವಿಜಯಪುರದಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಯಿತು. ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಆರಂಭವಾದ ಪ್ರತಿಭಟನಾ ರ‍್ಯಾಲಿ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಜಿಲ್ಲಾಧಿಕಾರಿಗಳ ಕಚೇರಿಗೆ ತಲುಪಿತು. ಬಳಿಕ…

Read More

ಎಸ್‌ಐಆರ್ ಹಾಗೂ ಬಿಎಲ್‌ಎ-2 ಕುರಿತು ಬಿಜೆಪಿ ಸಭೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 24:ಭಾರತೀಯ ಜನತಾ ಪಕ್ಷದ ವಿಜಯಪುರ ಮಹಾನಗರ ಘಟಕದ ವತಿಯಿಂದ ವಾರ್ಡ್ ಸಂಖ್ಯೆ 21, 22, 23, 24 ಹಾಗೂ 25ರ ವ್ಯಾಪ್ತಿಯ ಶ್ರೀ ಸಾಕ್ಷಿ ಗಣಪತಿ ದೇವಸ್ಥಾನದಲ್ಲಿ ಅಟಲ್ ಬಿಹಾರಿ ವಾಜಪೇಯಿ ಮಹಾಶಕ್ತಿ ಕೇಂದ್ರ–04ರ ಆಶ್ರಯದಲ್ಲಿ ಎಸ್‌ಐಆರ್ ಹಾಗೂ ಬಿಎಲ್‌ಎ-2 ಕುರಿತ ಮಹತ್ವದ ಸಭೆ ನಡೆಯಿತು. ರಾಜ್ಯದಲ್ಲಿ ಪಕ್ಷವು ಎಸ್‌ಐಆರ್ ಅಭಿಯಾನ ಹಾಗೂ ಬಿಎಲ್‌ಎ-2 ಕಾರ್ಯವನ್ನು ಸಂಘಟನಾತ್ಮಕವಾಗಿ ಬಲಪಡಿಸುತ್ತಿರುವ ಹಿನ್ನೆಲೆಯಲ್ಲಿ ಇಂತಹ ಸಭೆಗಳು ಆಯೋಜಿಸಲಾಗುತ್ತಿವೆ.ಸಭೆಯಲ್ಲಿ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಮಾತನಾಡಿ, ಎಸ್‌ಐಆರ್…

Read More

ಕಾತ್ರಾಳದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 12:ಪಕ್ಷದ ಸಂಘಟನೆಗೆ ಎಲ್ಲ ಕಾರ್ಯಕರ್ತರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಕರೆ ನೀಡಿದರು.ನಗರದಲ್ಲಿ ಶನಿವಾರ ನಡೆದ ಕಾತ್ರಾಳ ಗ್ರಾಮದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸರ್ವಜನರ ಅಭಿವೃದ್ಧಿ ಮತ್ತು ಏಳಿಗೆಗಾಗಿ ಕೆಲಸ ಮಾಡುತ್ತಿದೆ. ಹೊಸ ಕಾರ್ಯಕರ್ತರ ಸೇರ್ಪಡೆಯಿಂದ ಪಕ್ಷ ಮತ್ತಷ್ಟು ಬಲಿಷ್ಠವಾಗಲಿದ್ದು, ಹಳಬರು ಮತ್ತು ಹೊಸಬರು ಒಗ್ಗಟ್ಟಿನಿಂದ ಸಂಘಟನೆಯನ್ನು ಬಲಪಡಿಸಬೇಕು ಎಂದು ಹೇಳಿದರು.ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ…

Read More