ನಿರ್ವಹಣೆ ಕೊರತೆಯಿಃದ ವಿಜಯಪುರದಲ್ಲಿ ರಸ್ತೆಗಳು ಹಾಳು: ಪಟ್ಟಣಶೆಟ್ಟಿ ಆರೋಪ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 29:ವಿಜಯಪುರ ನಗರ ಸೇರಿದಂತೆ ವಿಜಯಪುರ, ನಾಗಠಾಣ ಮತ ಕ್ಷೇತ್ರದಲ್ಲಿ ರಸ್ತೆಗಳು ಹದಗೆಟ್ಟು ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ ಎಂದು ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಆರೋಪಿಸಿದರು.ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಒಂದು ವರ್ಷದಲ್ಲಿ ರಸ್ತೆಗಳು ಹಾಳಾಗಿವೆ. ನಿರ್ವಹಣೆ ಕೊರತೆಯಿಂದ ರಸ್ತೆಗಳು ಹದಗೆಟ್ಟಿದೆ. ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಗಮನ ಹರಿಸಿಲ್ಲ. ಇದರಿಂದ ಜನರು ತೊಂದರೆ ಎದುರಿಸುತ್ತಿದ್ದಾರೆ ಎಂದರು.ಮಹಾನಗರ ಪಾಲಿಕೆಯಲ್ಲಿ ವ್ಯಾಪಕ ಭೃಷ್ಟಾಚಾರ ನಡೆದಿದೆ. ಇ-ಸ್ವತ್ತು ದಂಧೆಯನ್ನಾಗಿ ಮಾಡಿಕೊಂಡಿದ್ದಾರೆ ಎಂದು ಆಪಾದಿಸಿದರು.ಹಿಂದೂ ಮಹಿಳೆಯರ ಬಗ್ಗೆ ಅವಮಾನಕರವಾಗಿ…

Read More

ಭಾನು ಮುಸ್ತಾಕ್ ಸ್ಪಷ್ಟನೆ ನೀಡಿ ದಸರಾ ಉದ್ಘಾಟಿಸಲಿ: ಯತ್ನಾಳ್

ಸಪ್ತ ಸಾಗರ ವಾರ್ತೆ, ವಿಜಯಪುರ, ಆ. 24:ಲೇಖಕಿ ಬಾನು ಮುಸ್ತಾಕ್ ಅವರು ನಾಡದೇವತೆ ಚಾಮುಂಡೇಶ್ವರಿ ದೇವಿ ದಸರಾ ಉತ್ಸವ ಉದ್ಘಾಟಿಸುವುದು ಸರಿಯಲ್ಲ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.ನಾನು ವೈಯಕ್ತಿಕವಾಗಿ ಶ್ರೀಮತಿ ಭಾನು ಮುಶ್ತಾಕ್ ಅವರನ್ನು ಲೇಖಕಿ ಹಾಗೂ ಹೋರಾಟಗಾರ್ತಿಯಾಗಿ ಗೌರವಿಸುತ್ತೇನೆ. ಆದರೆ, ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಸಲ್ಲಿಸಿ ದೀಪ ಬೆಳಗುವುದರ ಮೂಲಕ ದಸರಾವನ್ನು ಉದ್ಘಾಟಿಸುವುದು, ಅವರ ಸ್ವಂತ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧವಾಗಿದೆ ಎಂದಿದ್ದಾರೆ.ಇಸ್ಲಾಂ ಮೂರ್ತಿ…

Read More

ವಿಜಯಪುರ ಬಿಜೆಪಿ ನಗರ ಮಂಡಲ ಅಧ್ಯಕ್ಷರಾಗಿ ಪಾಟೀಲ್ ನೇಮಕ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 18:ವಿಜಯಪುರ ಬಿಜೆಪಿ ನಗರ ಮಂಡಲ ಅಧ್ಯಕ್ಷರಾಗಿ ಸಂದೀಪ್ ರಾಮನಗೌಡ ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ.ರಾಜ್ಯದ್ಯಕ್ಷರ ಸೂಚನೆ ಮೇರೆಗೆ ಪಕ್ಷದ ಸಂಘಟನೆ ಹಿತ ದೃಷ್ಟಿಯಿಂದ ಪಾಟೀಲ್ ಅವರನ್ನು ನೇಮಕ ಮಾಡಿ ಜಿಲ್ಲಾ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ ಆದೇಶ ಹೊರಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More

ಬಂಜಾರ ಅಭಿವೃದ್ಧಿ ನಿಗಮ ಕಚೇರಿಗೆ ಮುತ್ತಿಗೆ ಯತ್ನ: 40ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರ ಬಂಧನ, ಬಿಡುಗಡೆ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 8: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಮೀಸಲಿರಿಸಿದ ಎಸ್‌ಸಿಪಿ-ಟಿಎಸ್‌ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿರುವ ರಾಜ್ಯ ಸರ್ಕಾರದ ದಲಿತ ವಿರೋಧಿ ನೀತಿ ಖಂಡಿಸಿ ಭಾರತೀಯ ಜನತಾ ಪಕ್ಷ ರಾಜ್ಯದಾದ್ಯಂತ ಪ್ರತಿಭಟನೆಗೆ ಅಣಿಯಾದ ಹಿನ್ನೆಲೆಯಲ್ಲಿ ಹೋರಾಟದ ಭಾಗವಾಗಿ ಬಿಜೆಪಿ ಕಾರ್ಯಕರ್ತರು ಬಂಜಾರಾ ಅಭಿವೃದ್ಧಿ ನಿಗಮದ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ಈ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ತಡೆಯಲು ಮುಂದಾದರು. ಈ ವೇಳೆ ಕೆಲ ಕಾಲ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ವಾಗ್ವಾದ…

Read More

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 6:ರೈತರಿಗೆ ರಸಗೊಬ್ಬರ ಪೂರೈಸುವಲ್ಲಿ ವಿಫಲವಾದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಜಿಲ್ಲಾ ಬಿಜೆಪಿ ರೈತ ಮೋರ್ಚಾ ವತಿಯಿಂದ ಬುಧವಾರ ನಗರದ ಅಂಬೇಡ್ಕರ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.ನಂತರ ಪ್ರತಿಭಟನೆ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿಒಂದೇ ಒಂದು ರೈತಪರ ಯೋಜನೆ ಜಾರಿಗೊಳಿಸದೆ ತಾತ್ಸಾರ ಧೋರಣೆ ತಾಳಿರುವ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಮಾತನಾಡಿ, ರೈತರಿಗೆ ಪೊಳ್ಳು ಭರವಸೆ ಕೊಟ್ಟ…

Read More

ಸುಳ್ಳು ಹೇಳುವ ಬಿಜೆಪಿ ಬಹಿರಂಗ ಚರ್ಚೆಗೆ ಬರುವುದಿಲ್ಲ-ಮುಖ್ಯಮಂತ್ರಿ ಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ,ಮೈಸೂರು, ಜು. 20: ಸರ್ಕಾರದ ಸಾಧನೆಯ ಬಗ್ಗೆ ಸುಳ್ಳು ಹೇಳುವ ಬಿಜೆಪಿಯವರು ಎಂದಿಗೂ ಬಹಿರಂಗ ಚರ್ಚೆಗೆ ಬರುವುದಿಲ್ಲ. ಆದರೆ ನಾವು ಚರ್ಚೆಗೆ ಸದಾ ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಭಾನುವಾರ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.ರಾಜಕೀಯ ಲಾಭ ಪಡೆಯುವುದು ಬಿಜೆಪಿಯ ಭ್ರಮೆ. ನಿನ್ನೆ ನಡೆದ ಮೈಸೂರಿನ ಸಮಾವೇಶದಲ್ಲಿ ಮುಖ್ಯಮಂತ್ರಿಗಳು ಡಿಸಿಎಂ ಗೆ ಅವಮಾನ ಮಾಡಿದೆ ಎಂದು ಬಿಜೆಪಿಯವರು ಟೀಕಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಕಾರ್ಯಕ್ರಮದಲ್ಲಿ ಇರುವವರಿಗೆ ಸ್ವಾಗತ ಮಾಡುವುದು…

Read More

ಅಭಿವೃದ್ಧಿ ಕುರಿತು ಬಹಿರಂಗ ಚರ್ಚೆಗೆ ಬನ್ನಿ : ಬಿಜೆಪಿ, ಜೆಡಿಎಸ್ ಗೆ ಸಿ.ಎಂ. ಸಿದ್ದರಾಮಯ್ಯ ಸವಾಲ್

ಸಪ್ತಸಾಗರ ವಾರ್ತೆ, ಮೈಸೂರು, ಜು. 19:ಜೆಡಿಎಸ್- ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರ. ರಾಜ್ಯದ ಜನರ ಮನೆ ಬಾಗಿಲಿಗೆ ಸರ್ಕಾರ ತಲುಪಿಸಿದ್ದೇವೆ. ಈ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಹಾಕಿದರು.ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶ ಮತ್ತು 2578 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.ರಾಜ್ಯದ ಜನರಿಗೆ ಸರಣಿ ಸುಳ್ಳುಗಳ ಮೂಲಕ ಹಾದಿ ತಪ್ಪಿಸುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ನವರು ಒಂದೇ ವೇದಿಕೆಗೆ…

Read More

ಸಿಎಂ ಸಿದ್ದರಾಮಯ್ಯ ರಾಜ್ಯವನ್ನು ಸಾಲದ ಸುಳಿಗೆ ನೂಕಿದ್ದಾರೆ- ಯತ್ನಾಳ್ ಕಿಡಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 16: ಸಾರಿಗೆ ಸಂಸ್ಥೆಗಳನ್ನು ಆರ್ಥಿಕವಾಗಿ ಸದೃಢಗೊಳಿಸಬೇಕಾಗಿದ್ದ ಸರ್ಕಾರವು ತನ್ನ ವೋಟ್ ಬ್ಯಾಂಕ್ ರಾಜಕಾರಣಕ್ಕೆ ನಷ್ಟಕ್ಕೆ ನೂಕಿದೆ. ಭವಿಷ್ಯ ನಿಧಿ (ಪಿ.ಎಫ್) ಪಾವತಿ ಮಾಡುವುದಕ್ಕೂ ಹಣವಿಲ್ಲದೆ ಈಗ ಅದಕ್ಕೂ ಸಾಲ ಮಾಡಲು ನಿರ್ಧರಿಸಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಿಡಿಕಾರಿದ್ದಾರೆ.ಎರಡು ದಿನಗಳ ಹಿಂದೆಯಷ್ಟೇ ‘ಶಕ್ತಿ’ ಯೋಜನೆಯ ಬಗ್ಗೆ ಸರ್ಕಾರ ಎಲ್ಲಾ ಪತ್ರಿಕೆಗಳಲ್ಲಿ, ಜಾಲತಾಣಗಳಲ್ಲಿ ಯೋಜನೆಯ ಯಶಸ್ಸಿನ ಬಗ್ಗೆ ಜಾಹೀರಾತು ನೀಡಿತ್ತು. ಸಾರಿಗೆ ನೌಕರರಿಗೆ 38 ತಿಂಗಳ ಭತ್ಯೆ ಮತ್ತು ವೇತನ ಹೆಚ್ಚಳ…

Read More

ನಮ್ಮದು ಅಭಿವೃದ್ಧಿ ಪರ ಸರ್ಕಾರ: ಸಿದ್ದರಾಮಯ್ಯ ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಶಂಕುಸ್ಥಾಪನೆ, ಉದ್ಘಾಟನೆ ಸಮಾರಂಭದಲ್ಲಿ ಸಿಎಂ ಭಾಗಿ

ಸಪ್ತಸಾಗರ ವಾರ್ತೆ, ಜು. 14:ನಮ್ಮದು ಅಭಿವೃದ್ಧಿಪರ ಸರ್ಕಾರ. ಬಿಜೆಪಿ ಅಪಪ್ರಚಾರಕ್ಕೆ ಅಭಿವೃದ್ಧಿ ಮೂಲಕವೇ ಉತ್ತರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಸೋಮವಾರ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಶಕ್ತಿ ಯೋಜನೆಯಡಿ 500 ಕೋಟಿ ಮಹಿಳೆಯರು ಉಚಿತ ಪ್ರಯಾಣ ನಡೆಸಿದ ಹಿನ್ನೆಲೆಯಲ್ಲಿ ಕೆ.ಕೆ.ಆರ್.ಟಿ.ಸಿ ಬಸ್‌ಗೆ ಪೂಜೆ ನೆರವೇರಿಸಿ, ಮಹಿಳಾ ಪ್ರಯಾಣಿಕರಿಗೆ ಉಚಿತ ಟಿಕೆಟ್ ವಿತರಿಸಿ, ನಂತರ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಿ, ಲಿಂಬೆ ಅಭಿವೃದ್ಧಿ ಮಂಡಳಿಯ ಲಾಂಛನವನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.4157…

Read More

ಪಾಲಿಕೆ ನೌಕರರ ಹೋರಾಟಕ್ಕೆ ಬಿಜೆಪಿ ಬೆಂಬಲ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 12: ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ವಿಜಯಪುರ ಮಹಾನಗರ ಪಾಲಿಕೆ ನೌಕರರ ಸಂಘದ ವತಿಯಿಂದ ಪಾಲಿಕೆ ಆವರಣದಲ್ಲಿ ಕಳೆದ 5 ದಿನಗಳಿಂದ ನಡೆಯುತ್ತಿರುವ ಧರಣಿ ಸ್ಥಳಕ್ಕೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ ಶನಿವಾರ ಭೇಟಿ ನೀಡಿ, ಪಾಲಿಕೆ ನೌಕರರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಅವರು ಮಾತನಾಡಿ, ಪಾಲಿಕೆ ನೌಕರರ ನ್ಯಾಯಯುತ ಹೋರಾಟಕ್ಕೆ ಬಿಜೆಪಿ ಸದಾ ಬೆಂಬಲವಾಗಿ ನಿಲ್ಲುತ್ತದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಸಿಂದಗಿ ವಿಧಾನಸಭಾ…

Read More