ಕನಮಡಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 22: ಬಬಲೇಶ್ವರ ಮತಕ್ಷೇತ್ರ ಬಿಜೆಪಿ ಮುಕ್ತವಾಗುತ್ತಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ‌ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಸೋಮವಾರ ನಗರದ ಸಚಿವರ ಗೃಹ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನಮಡಿ ಗ್ರಾಮದ ಬಿಜೆಪಿ ಮುಖಂಡ ಪ್ರಶಾಂತ ಸುಭಾಸಗೌಡ ಪಾಟೀಲ ಮತ್ತು‌ ಅವರ ಬೆಂಬಲಿಗರನ್ನು ಕಾಂಗ್ರೆಸ್ ಪಕ್ಷಕ್ಜೆ ಸೇರ್ಪಡೆ ಮಾಡಿಕೊಂಡು ಅವರು ಮಾತನಾಡಿದರು.ಬಬಲೇಶ್ವರ ಮತಕ್ಷೇತ್ರದಲ್ಲಿ ಬಿಜೆಪಿಯ ಅರ್ಧದಷ್ಟು ನಾಯಕರು ಮತ್ತು ಕಾರ್ಯಕರ್ತರು ಕಾಂಗ್ರೆಸ್ ಸೇರಲಿದ್ದಾರೆ. ಆರು ಬ್ಯಾಚ್ ಗಳಲ್ಲಿ ಈಗ…

Read More

ದೇಶದ 140 ಕೋಟಿ ಜನರ ಮತದಾನದ ಹಕ್ಕಿಗಾಗಿ ಹೋರಾಟ:ಡಿಕೆಶಿ

ಸಪ್ತಸಾಗರ ವಾರ್ತೆ, ನವದೆಹಲಿ, ಡಿ.14:“ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಾವು ಮತಕಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ದೆಹಲಿಯ ಕರ್ನಾಟಕ ಭವನದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು.ವೋಟ್ ಚೋರಿ ಪ್ರತಿಭಟನೆ ಬಗ್ಗೆ ಕೇಳಿದಾಗ, “ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಾವು ಮತಕಳ್ಳತನ ವಿರುದ್ಧದ ಹೋರಾಟ ಆರಂಭಿಸಿದ್ದೆವು. ಈಗ ರಾಮಲೀಲಾ…

Read More

ಬಿಜೆಪಿ ಪ್ರತಿಭಟನೆ ಮಾಡಬೇಕಿರುವುದು ಕೇಂದ್ರ ಸರ್ಕಾರದ ವಿರುದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ ಬೆಳಗಾವಿ, ಡಿ.9:“ರಾಜ್ಯಕ್ಕೆ ಅನ್ಯಾಯ ಆಗಿರುವುದು ಕೇಂದ್ರ ಸರ್ಕಾರದಿಂದ. ಹೀಗಾಗಿ ಬಿಜೆಪಿಯು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು.ಬೆಳಗಾವಿ ಸರ್ಕಿಟ್ ಹೌಸ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.ರಾಜ್ಯ ಸರ್ಕಾರ ವಿರುದ್ಧ ಬಿಜೆಪಿಯ ಪ್ರತಿಭಟನೆ ಬಗ್ಗೆ ಕೇಳಿದಾಗ “ಕಬ್ಬು, ಮೆಕ್ಕೆಜೋಳ, ಸಕ್ಕರೆ, ಎಥನಾಲ್ ಸೇರಿದಂತೆ ಪ್ರತಿ ವಿಚಾರದಲ್ಲಿ ಅನ್ಯಾಯ ಆಗಿರುವುದು ಕೇಂದ್ರ ಸರ್ಕಾರದಿಂದ. ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ನೀಡಬೇಕಾದ ಅನುದಾನ…

Read More

ಬಿಹಾರ್ ನಲ್ಲಿ ಎನ್ ಡಿ ಎ ಜಯಭೇರಿ: ಬಿಜೆಪಿ ವಿಜಯೋತ್ಸವ

ಸಪ್ತಸಾಗರ ವಾರ್ತೆ ವಿಜಯಪುರ, ನ. 15: ಬಿಹಾರಿನಲ್ಲಿ ಎನ್‌ಡಿಎ ಮೈತ್ರಿಕೂಟ ಭರ್ಜರಿ ಜಯಭೇರಿ ಸಾಧಿಸಿದ ಹಿನ್ನೆಲೆಯಲ್ಲಿ ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರು ಶನಿವಾರ ವಿಜಯೋತ್ಸವ ಆಚರಿಸಿದರು.ನಗರದ ಗಾಂಧಿ ವೃತ್ತದಲ್ಲಿ ಜಮಾಯಿಸಿದ ನೂರಾರು ಕಾರ್ಯಕರ್ತರು ಬಿಜೆಪಿ ಬಾವುಟ ಹಿಡಿದು ಸಂಭ್ರಮೋತ್ಸವದಲ್ಲಿ ಭಾಗಿಯಾದರು. ಪಟಾಕಿ ಸಿಡಿಸಿ, ಪರಸ್ಪರ ಸಿಹಿ ತಿನಿಸಿ ವಿಜಯೋತ್ಸವ ಸಂಭ್ರಮದಲ್ಲಿ ಮಿಂದೆದ್ದರು.ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ರಮೇಶ ಜಿಗಜಿಣಗಿ, ಬಿಜೆಪಿಯ ಜನಪರ ನಿಲುವಿಗೆ ಬಿಹಾರ ಜನತೆ ಗೆಲುವಿನ ಉಡುಗೊರೆ ನೀಡಿದ್ದಾರೆ. ಬಿಹಾರ ಸರ್ವತೋಮುಖ ವಿಕಾಸವನ್ನು ಕೇಂದ್ರವಾಗಿರಿಸಿಕೊಂಡು ಚುನಾವಣೆ ಎದುರಿಸಿದ್ದ…

Read More

ಬಿಜೆಪಿ ವತಿಯಿಂದ ಕನಕ ಜಯಂತಿ

ಸಪ್ತಸಾಗರ ವಾರ್ತೆ, ವಿಜಯಪುರ, ನ. 8 : ಭಾರತೀಯ ಜನತಾ ಪಕ್ಷದ ಜಿಲ್ಲಾ ಘಟಕದ ವತಿಯಿಂದ ಭಕ್ತ ಕನಕದಾಸರ ಜಯಂತೋತ್ಸವವನ್ನು ಆಚರಿಸಲಾಯಿತು. ಬಿಜೆಪಿ ಕಾರ್ಯಾಲಯದಲ್ಲಿ ಭಕ್ತ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾಂಜಲಿ ಸಲ್ಲಿಸಿ ಪೂಜೆ ಸಲ್ಲಿಸಲಾಯಿತು. ನಂತರ ಕನಕದಾಸರ ವೃತ್ತಕ್ಕೆ ತೆರಳಿದ ಕಾರ್ಯಕರ್ತರು ಕನಕದಾಸರ ವೃತ್ತಕ್ಕೆ ಮಾಲಾರ್ಪಣೆ ಮಾಡಿ ಗೌರವಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಮಾತನಾಡಿ, ಕನಕದಾಸರು ಶ್ರೇಷ್ಠ ದೈವಭಕ್ತರು, ಅವರಲ್ಲಿರುವ ಅದಮ್ಯ ದೈವ ಭಕ್ತಿ ಪ್ರತಿಯೊಬ್ಬರಿಗೂ ಸ್ಪೂರ್ತಿ, ಕನಕದಾಸರ ಶ್ರೇಷ್ಠ ಭಕ್ತಿಗೆ ಕೇಶವ…

Read More

ತ್ವರಿತವಾಗಿ ಬೆಳೆ ಹಾನಿ ಪರಿಹಾರ ನೀಡಲು ಬಿಜೆಪಿ ರೈತ ಮೋರ್ಚಾ ನಿಯೋಗ ಜಿಲ್ಲಾಧಿಕಾರಿಗಳಿಗೆ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 13:ಜಿಲ್ಲಾ ಬಿಜೆಪಿ ರೈತ ಮೋರ್ಚಾ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಭೇಟಿ ಮಾಡಿ ಬೆಳೆ ಪರಿಹಾರವನ್ನು ಕೂಡಲೇ ನೀಡಬೇಕೆಂದು ಸೋಮವಾರ ಸಂಜೆ ಮನವಿ ಸಲ್ಲಿಸಲಾಯಿತು.ರಾಜ್ಯದಲ್ಲಿ ಯಾವುದೇ ಜಿಲ್ಲೆಯಲ್ಲಿ ಆಗದಷ್ಟು ವಾಡಿಕೆಗಿಂತ ಹೆಚ್ಚಿನ ಮಳೆ ವಿಜಯವುರ ಜಿಲ್ಲೆಯಲ್ಲಿ ಆಗಿದೆ ವರದಿಗಳ ಪ್ರಕಾರ ವಾಡಿಕೆ ಗಿಂತ ಶೇ 150 ಕ್ಕೂ ಹೆಚ್ಚು ಮಳೆಯಾಗಿದೆ ಎಂದು ತಿಳಿದು ಬಂದಿರುತ್ತದೆ. ವಿಜಯಪುರ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ 7.50 ಲಕ್ಷ ಹೆಕ್ಟರ್ ಪ್ರದೇಶದ ಬೆಳೆ ಸಂಪೂರ್ಣ ನಾಶವಾಗಿದೆ. ಮೂರು…

Read More

ಬಿಜೆಪಿ ನಿಯೋಗದಿಂದ ಬೆಳೆ ಹಾನಿ ಸಮೀಕ್ಷೆ: ರೈತರ ಅಹವಾಲು ಕೇಳಿದ ಬಿಜೆಪಿ ಮುಖಂಡರು

ಸಪ್ತಸಾಗರ ವಾರ್ತೆ ವಿಜಯಪುರ, ಅ. 4 : ಧಾರಾಕಾರ ಮಳೆ, ಭೀಮೆ ಹಾಗೂ ಡೋಣಿ ನದಿ ಪ್ರವಾಹದಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಹಾಗೂ ಜಮೀನುಗಳಿಗೆ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ, ವಿಧಾನ ಪರಿಷತ್ ಪ್ರತಿಪಕ್ಷ ಮುಖ್ಯಸಚೇತಕ ಎನ್. ರವಿಕುಮಾರ್, ಮಾಜಿ ಸಚಿವ ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಸೇರಿದಂತೆ ಅನೇಕ ಹಿರಿಯ ನಾಯಕರ ತಂಡ ಭೇಟಿ ನೀಡಿ ಹಾನಿ ಸಮೀಕ್ಷೆ ನಡೆಸಿ ರೈತರ ಅಹವಾಲು ಆಲಿಸಿತು.ಅಂಜುಟಗಿ, ಅಗರಖೇಡ, ಮಿರಗಿ, ದೇವಣಗಾಂವ ಸೇರಿದಂತೆ ಹಲವಾರು…

Read More