BLDE Deemed University
ಗುಣಮಟ್ಟದ ಸೇವೆ ನೀಡುವಲ್ಲಿ ಬಿ ಎಲ್ ಡಿ ಇ ಆಸ್ಪತ್ರೆ ಮುಂಚೂಣಿಯಲ್ಲಿ: ಬಸನಗೌಡ ಪಾಟೀಲ
ಸಪ್ತ ಸಾಗರ ವಾರ್ತೆ ವಿಜಯಪುರ, ಸೆ. 17: ಬಿ.ಎಲ್.ಡಿ.ಇ ಆಸ್ಪತ್ರೆ ಬಡವರು ಮತ್ತು ಮಹಿಳೆಯರಿಗೆ ಗುಣಮಟ್ಟದ ಸೇವೆ ನೀಡುವಲ್ಲಿ ಮುಂಚೂಣಿಯಲ್ಲಿದೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಾಧಿಪತಿ ಬಸನಗೌಡ ಎಂ. ಪಾಟೀಲ ಹೇಳಿದ್ದಾರೆ.ಬುಧವಾರ ನಗರದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿವಿಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನದ ಅಡಿಯಲ್ಲಿ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಗರ್ಭಿಣಿ ಮಹಿಳೆಯರಿಗೆ ಉಚಿತವಾಗಿ…
ಎಂಬಿಬಿಎಸ್ ಕೋರ್ಸಿಗೆ ಹೆಚ್ಚುವರಿ 50 ಸೀಟು ಮಂಜೂರು
ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 5: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರಕ್ಕೆ 2025-26ನೇ ಶೈಕ್ಷಣಿಕ ವರ್ಷದಲ್ಲಿ ಎಂ.ಬಿ.ಬಿ.ಎಸ್ ಕೋರ್ಸಿಗೆ 50 ಹೆಚ್ಚುವರಿ ಸೀಟುಗಳು ಮಂಜೂರಾಗಿವೆ. ಇದರಿಂದಾಗಿ ಬಿ.ಎಲ್.ಡಿ.ಇ ವೈದ್ಯಕೀಯ ಕಾಲೇಜಿನಲ್ಲಿ ಈ ಬಾರಿ ಒಟ್ಟು 250 ವಿದ್ಯಾರ್ಥಿಗಳಿಗೆ ಎಂ.ಬಿ.ಬಿ.ಎಸ್ ಪ್ರಥಮ ವರ್ಷಕ್ಕೆ ಪ್ರವೇಶ ಸಿಗಲಿದೆ.ಕಾಲೇಜು ಈ ವರ್ಷದ ಜನೇವರಿಯಲ್ಲಿ ಹೆಚ್ಚುವರಿ ಸೀಟು ಮಂಜೂರು ಮಾಡುವಂತೆ ಅರ್ಜಿ ಸಲ್ಲಿಸಿತ್ತು. ಅದರಂತೆ ಜೂನ್ 2025ರಲ್ಲಿ ನ್ಯಾಶನಲ್…
ಬಿ ಎಲ್ ಡಿ ಇ ಡೀಮ್ಡ್ ವಿವಿಯಲ್ಲಿ ಶಿಕ್ಷಕ ದಿನಾಚರಣೆ
ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 5: ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ತಜ್ಞ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಶಿಕ್ಷಕರ ದಿನ ಆಚರಿಸಲಾಯಿತು.ಶುಕ್ರವಾರ ಡೀಮ್ಡ್ ವಿವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ವಿವಿಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಶಿಕ್ಷಕರು ಸಮಾಜದ ನಿಜವಾದ ದಾರಿದೀಪ. ಅವರ ಮಾರ್ಗದರ್ಶನವಿಲ್ಲದೆ ಉತ್ತಮ ವಿದ್ಯಾರ್ಥಿಗಳನ್ನು ತಯಾರಿಸುವುದು ಅಸಾಧ್ಯ. ಶಿಕ್ಷಕರು ಕೇವಲ ಪಾಠ ಕಲಿಸುವವರಲ್ಲ. ಅವರು ಮೌಲ್ಯಗಳನ್ನು ಬೆಳೆಸುತ್ತ ವಿದ್ಯಾರ್ಥಿಗಳ ಜೀವನವನ್ನು ರೂಪಿಸುತ್ತಾರೆ. ಬಿ.ಎಲ್.ಡಿ.ಇ ವಿವಿ ಶ್ರೇಷ್ಠ ಶಿಕ್ಷಣ, ಗುಣಮಟ್ಟದ…
ಬೆಂಗಳೂರಿನಲ್ಲಿ ಬಿ.ಎಲ್.ಡಿ.ಇ. ವಿಶ್ವವಿದ್ಯಾಲಯದ ಕ್ಯಾಂಪಸ್ ಶೀಘ್ರ ಆರಂಭ:
ಸಪ್ತಸಾಗರ ವಾರ್ತೆ, ವಿಜಯಪುರ, ಆ. 21:ಬಿ.ಎಲ್.ಡಿ.ಇ. ವಿಶ್ವವಿದ್ಯಾಲಯವು ಬೆಂಗಳೂರಿನಲ್ಲಿ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ತನ್ನ ಕ್ಯಾಂಪಸ್ ಅನ್ನು ಸ್ಥಾಪಿಸುತ್ತಿದೆ ಎಂದು ಬಿಎಲ್ ಡಿಇ ಡೀಮ್ಡ್ ವಿಶ್ವವಿದ್ಯಾಲಯ ಕುಲಾಧಿಪತಿ ಬಸನಗೌಡ ಎಂ. ಪಾಟೀಲ ತಿಳಿಸಿದರು.ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, Engineering, Computer Applications, Business Administration, Pharmacy, Law, Architecture, Design and Applied Sciences ಸೇರಿದಂತೆ ಹಂತ ಹಂತವಾಗಿ 8-10 ಕಾಲೇಜುಗಳನ್ನು ಆರಂಭಿಸಲಿದೆ. ಇದಲ್ಲದೇ ಅಂತಾರಾಷ್ಟ್ರೀಯ ಶಾಲೆಯನ್ನೂ ಸಹ ಪ್ರಾರಂಭಿಸಲು ಯೋಜಿಸಿದೆ ಎಂದರು.ವಿವಿ ಈಗಾಗಲೇ ಇಂಜಿನಿಯರಿಂಗ್ ಮಹಾವಿದ್ಯಾಲಯ ಹೊಂದಿದ್ದು,ಬಿ.ಎಲ್.ಡಿ.ಇ….
ಬಿಎಲ್ ಡಿಇ ಡೀಮ್ಡ್ ವಿವಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ
ಸಪ್ತಸಾಗರ ವಾರ್ತೆ, ವಿಜಯಪುರ, ಆ. 15: ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ 79ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಇಂದು ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ವಿವಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಧ್ವಜಾರೋಹಣ ನೆರವೇರಿಸಿದರು.ಬಳಿಕ ಮಾತನಾಡಿದ ಅವರು, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರ ಯೋಧರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಬ್ರಿಟಿಷ್ ಆಳ್ವಿಕೆಯಿಂದ ಭಾರತವನ್ನು ಮುಕ್ತಗೊಳಿಸಲು ಹೋರಾಡಿದ ಮಹಾನ್ ನಾಯಕರ ತ್ಯಾಗ ಮತ್ತು ಬಲಿದಾನದ ಫಲವಾಗಿ ನಾವು ಇಂದು ಸ್ವತಂತ್ರ ಭಾರತದಲ್ಲಿ ಬದುಕುತ್ತಿದ್ದೇವೆ. ಈ ದಿನದಂದು ಅವರ ತ್ಯಾಗವನ್ನು ಸ್ಮರಿಸುವ…


