ಬಿ.ಎಲ್.ಡಿ.ಇ ಡೀಮ್ಡ್ ವಿವಿ ಮಹಿಳಾ ಬ್ಯಾಡ್ಮಿಂಟನ್ ತಂಡಕ್ಕೆ ಪ್ರಥಮ ಸ್ಥಾನ
ಸಪ್ತಸಾಗರ ವಾರ್ತೆ,ವಿಜಯಪುರ, ಅ.7: ಮಹಾರಾಷ್ಟ್ರದ ಲೋಣಿಯ ಪ್ರವರ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (PIMS) ವತಿಯಿಂದ ಅ.3ರಿಂದ 6ರವರೆಗೆ ಆಯೋಜಿಸಿದ್ದ ‘ಇಗ್ನಿಷಿಯಾ-2026’ ಅಂತರ ವೈದ್ಯಕೀಯ ಮಹಾವಿದ್ಯಾಲಯಗಳ ಕ್ರೀಡಾಕೂಟದಲ್ಲಿ ಬಿ.ಎಲ್.ಡಿ.ಇ (ಡೀಮ್ಡ್ ವಿಶ್ವವಿದ್ಯಾಲಯ)ದ ಶ್ರೀ ಬಿ.ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ 27 ವಿದ್ಯಾರ್ಥಿಗಳ ತಂಡ ಭಾಗವಹಿಸಿ ಗಮನಾರ್ಹ ಸಾಧನೆ ಮಾಡಿದೆ.ಕ್ರೀಡಾಕೂಟದ ಮಹಿಳಾ ಬ್ಯಾಡ್ಮಿಂಟನ್ ಡಬಲ್ಸ್ ವಿಭಾಗದಲ್ಲಿ ವಿಶ್ವವಿದ್ಯಾಲಯದ ತನುಶ್ರೀ ಪಾಟೀಲ ಹಾಗೂ ಸುಭಗಾ ಪಿ.ಎನ್. ಅವರು ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ…


