ದಸರಾ ಪುಸ್ತಕ ಮೇಳದಲ್ಲಿ ಹೊಸ ಪುಸ್ತಕಗಳ ಬಿಡುಗಡೆಗೆ ನೋಂದಣಿ : ಅ.5 ಅರ್ಜಿ ಸಲ್ಲಿಕೆಗೆ ಕೊನೆಯ ದಿನ
ಸಪ್ತಸಾಗರ ವಾರ್ತೆ,ವಿಜಯಪುರ, ಸೆ.25 :ಮೈಸೂರು ದಸರಾ ಉತ್ಸವ-2026ರ ಅಂಗವಾಗಿ ಅಕ್ಟೋಬರ್ 11ರಿಂದ 20ರವರೆಗೆ ಮೈಸೂರಿನ ಹಳೆ ಜಿಲ್ಲಾಧಿಕಾರಿ ಕಚೇರಿ ಎದುರಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಆಯೋಜಿಸಲಾಗಿರುವ ಮೈಸೂರು ದಸರಾ ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳ-2026ರಲ್ಲಿ ಹೊಸ ಪುಸ್ತಕಗಳ ಬಿಡುಗಡೆಗೆ ಅವಕಾಶ ಕಲ್ಪಿಸಲಾಗಿದ್ದು, ಆಸಕ್ತ ಲೇಖಕರು ಹಾಗೂ ಪ್ರಕಾಶಕರು ನೋಂದಾಯಿಸಿಕೊಳ್ಳುವಂತೆ ಕನ್ನಡ ಪುಸ್ತಕ ಪ್ರಾಧಿಕಾರ ತಿಳಿಸಿದೆ.ಪುಸ್ತಕ ಮೇಳದ ಸಂದರ್ಭದಲ್ಲಿ ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿಚಾರ ಸಂಕಿರಣ ಸೇರಿದಂತೆ ವಿವಿಧ ಸಾಹಿತ್ಯಕ ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದ್ದು, 2026ರಲ್ಲಿ…


