
ಬೇಡಿಕೆ ಈಡೇರದಿದ್ದರೆ ತರಗತಿ ಬಹಿಷ್ಕಾರ: ಶಿಕ್ಷಕರ ಸಂಘದ ಎಚ್ಚರಿಕೆ
ಸಪ್ತಸಾಗರ ವಾರ್ತೆ, ವಿಜಯಪುರ,ಆ.೧೨:ಪ್ರಾಥಮಿಕ ಶಾಲಾ ಶಿಕ್ಷಕರ “ವೃಂದ ಮತ್ತು ನೇಮಕಾತಿ ನಿಯಮ” ಬದಲಾಯಿಸಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಿ, ನ್ಯಾಯಯುತ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.ಮಂಗಳವಾರ ಜಿಲ್ಲೆಯ ವಿವಿಧ ಭಾಗಗಳಿಂದ ಬಂದ ಶಿಕ್ಷಕ ಸಮೂಹ ಹಾಗೂ ಪದಾಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಸೇರಿ ಹಕ್ಕೋತ್ತಾಯದ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಅರ್ಜುನ ಲಮಾಣಿ ಮಾತನಾಡಿ,…