ವಿಜಯಪುರದಲ್ಲಿ ಯುವಕನ ಬರ್ಬರ ಹತ್ಯೆ
ಸಪ್ತಸಾಗರ ವಾರ್ತೆ,ವಿಜಯಪುರ, ಜು. 5: ನಗರದ ಚಪ್ಪರಬಂದ್ ಗಲ್ಲಿಯಲ್ಲಿ 36 ವರ್ಷದ ಯುವಕನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಭಾನುವಾರ ಬೆಳಕಿಗೆ ಬಂದಿದೆ.ಮೃತನನ್ನು ಉಮರಸಾಬ್ ಪಟೇಲ್ (36) ಎಂದು ಗುರುತಿಸಲಾಗಿದೆ. ಆರೋಪಿಗಳು ಕಬ್ಬಿಣದ ರಾಡ್ ಹಾಗೂ ಸ್ಕ್ರೂ (ಚೂಪಾದ ಕಬ್ಬಿಣದ ವಸ್ತು) ಬಳಸಿ ತಲೆಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆ ಮಾಡಿರುವುದಾಗಿ ಪ್ರಾಥಮಿಕ ಮಾಹಿತಿ ತಿಳಿಸಿದೆ.ಉಮರಸಾಬ್ ಶನಿವಾರ ರಾತ್ರಿ ತನ್ನ ಕೆಲ ಗೆಳೆಯರೊಂದಿಗೆ ಪಾರ್ಟಿಯಲ್ಲಿ ಭಾಗವಹಿಸಿದ್ದ ಎನ್ನಲಾಗಿದೆ. ಇದೇ ವೇಳೆ ಪರಸ್ಪರ ಮಾತಿನ ಚಕಮಕಿ ನಡೆದು ಜಗಳಕ್ಕೆ…


