ಯುವಕರು ದುಶ್ಚಟಗಳಿಂದ ದೂರವಿದ್ದು ಆರೋಗ್ಯಯುತ ಸಮಾಜ ನಿರ್ಮಿಸಿ-ಅರವಿಂದ ಹಾಗರಗಿ
ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 3: ಯುವ ಜನತೆ ದುಶ್ಚಟಗಳಿಂದ ದೂರವಿರಬೇಕು. ತಂಬಾಕು ಸೇವನೆ ಸೇವನೆ ತ್ಯಜಿಸಿ, ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ್ ಎಸ್. ಹಾಗರಗಿ ಹೇಳಿದರು.ಬುಧವಾರ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ, ಕಲಬುರಗಿಯ ಇಂಡಿಯನ್ ಕ್ಯಾನ್ಸರ್ ಸೊಸೈಟಿ, ವಿಜಯಪುರದ ನಾಗೂರ್ ನರ್ಸಿಂಗ್ ಕಾಲೇಜು ಹಾಗೂ…


