ಸಚಿವ ಸಂಪುಟ ವಿಳಂಬಕ್ಕೆ ಸಿಎಂ ವಿರುದ್ಧ ಯತ್ನಾಳ ತೀವ್ರ ವಾಗ್ದಾಳಿ

‘ಎಲ್ಲ ಇಲಾಖೆಗಳನ್ನೂ ತಮ್ಮ ಬಳಿಯೇ ಇಟ್ಟುಕೊಳ್ಳಲು ಸಂಪುಟ ವಿಸ್ತರಣೆ ಮುಂದೂಡುತ್ತಿದ್ದಾರೆ; ಬರದ ನಡುವೆಯೂ ಕೃಷಿ ಸಚಿವರಿಲ್ಲ‘ ಸಪ್ತಸಾಗರ ವಾರ್ತೆ,ವಿಜಯಪುರ, ಜು. 29:ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಆಗುತ್ತಿರುವ ವಿಳಂಬದ ವಿರುದ್ಧ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ತೀವ್ರ ವಾಗ್ದಾಳಿ ನಡೆಸಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ದೇಶಪೂರ್ವಕವಾಗಿಯೇ ಸಂಪುಟ ವಿಸ್ತರಣೆಯನ್ನು ಮುಂದೂಡುತ್ತಿದ್ದಾರೆ ಎಂದು ಆರೋಪಿಸಿದರು.ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಚಿವ ಸಂಪುಟ ವಿಸ್ತರಣೆಯನ್ನು ವಿಳಂಬಗೊಳಿಸುತ್ತಾ ಹೋದರೆ ಹೆಚ್ಚಿನ ಇಲಾಖೆಗಳು…

Read More