ನೀಟ್ ಪರೀಕ್ಷೆ ರದ್ದತಿಗೆ ಆಗ್ರಹಿಸಿ ರಾಷ್ಟ್ರಪತಿಗಳಿಗೆ ಮನವಿ: ಜಂತರ್ ಮಂತರ್ ಪ್ರತಿಭಟನೆಗೆ ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ ಬೆಂಬಲ

ಸಪ್ತಸಾಗರ ವಾರ್ತೆ,ವಿಜಯಪುರ, ಜು.24:ನೀಟ್ (NEET) ಪರೀಕ್ಷೆ ವಿರೋಧಿಸಿ ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆಗೆ ಬೆಂಬಲ ಸೂಚಿಸಿ, ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ (ರಿ.) ವಿಜಯಪುರ ಜಿಲ್ಲಾ ಘಟಕವು ಜಿಲ್ಲಾಧಿಕಾರಿಗಳ ಮೂಲಕ ಭಾರತದ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿತು.ಮನವಿಯಲ್ಲಿ, ನೀಟ್ ಪರೀಕ್ಷೆಗೆ ಸಂಬಂಧಿಸಿದಂತೆ ದೇಶಾದ್ಯಂತ ವಿದ್ಯಾರ್ಥಿಗಳು, ಪೋಷಕರು ಹಾಗೂ ವಿವಿಧ ಸಾಮಾಜಿಕ ಸಂಘಟನೆಗಳು ವ್ಯಕ್ತಪಡಿಸುತ್ತಿರುವ ಆತಂಕವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಲಾಗಿದೆ. ವಿದ್ಯಾರ್ಥಿಗಳಿಗೆ ಸಮಾನ ಶಿಕ್ಷಣದ ಅವಕಾಶ, ಸಾಮಾಜಿಕ ನ್ಯಾಯ ಹಾಗೂ ಸಂವಿಧಾನಬದ್ಧ ಹಕ್ಕುಗಳ ರಕ್ಷಣೆಗೆ…

Read More