ಓಎಂಆರ್ ಶೀಟ್–ಪ್ರಶ್ನೆ ಪತ್ರಿಕೆ ವ್ಯತ್ಯಾಸ, ಪರೀಕ್ಷೆ ವಿಳಂಬದಿಂದ ಅಭ್ಯರ್ಥಿಗಳ ಭವಿಷ್ಯಕ್ಕೆ ಧಕ್ಕೆ; ಕೇಶವ್ ಪ್ರಸಾದ
ಸಪ್ತಸಾಗರ ವಾರ್ತೆ,ವಿಜಯಪುರ, ಆ.2: ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ಓಎಂಆರ್ ಶೀಟ್ ಮತ್ತು ಪ್ರಶ್ನೆ ಪತ್ರಿಕೆಯಲ್ಲಿನ ವ್ಯತ್ಯಾಸ, ಓಎಂಆರ್ ಶೀಟ್ ವಿತರಣೆಯಲ್ಲಿನ ಅವ್ಯವಸ್ಥೆ ಹಾಗೂ ಪರೀಕ್ಷೆ ವಿಳಂಬವಾಗಿ ಆರಂಭವಾದ ಘಟನೆಗಳು ಅಭ್ಯರ್ಥಿಗಳಲ್ಲಿ ತೀವ್ರ ಆತಂಕ ಮತ್ತು ಅನುಮಾನಕ್ಕೆ ಕಾರಣವಾಗಿವೆ ಎಂದು ವಿಧಾನ ಪರಿಷತ್ ಸದಸ್ಯ ಕೇಶವ ಪ್ರಸಾದ್ ಆರೋಪಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಪ್ರತಿನಿಧಿಸುವ ಕ್ಷೇತ್ರದಲ್ಲಿಯೇ ಇಂತಹ ಗಂಭೀರ ಗೊಂದಲ ಉಂಟಾಗಿರುವುದರಿಂದ ಅವರು ನೈತಿಕ…


