ವಿಜಯಪುರದಲ್ಲಿ ಡಿ. 6ರಂದು ಬೃಹತ್ ಕ್ಯಾಂಡಲ್ ಮಾರ್ಚ್
ಸಪ್ತಸಾಗರ ವಾರ್ತೆ ವಿಜಯಪುರ, ಡಿ. 2: ನಗರದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಘಟಕದ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ 68ನೇ ಮಹಾಪರಿನಿರ್ವಾಣ ದಿನದ ಅಂಗವಾಗಿ ಸಾವಿರಾರು ವಿದ್ಯಾರ್ಥಿಗಳಿಂದ ಬೃಹತ್ ಕ್ಯಾಂಡಲ್ ಮಾರ್ಚ್ ಆಯೋಜಿಸಲಾಗಿದೆ.ಕಾರ್ಯಕ್ರಮದ ಅಂಗವಾಗಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋದ್ದಾರ, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿ ಪರಿಷತ್ ಮುಖಂಡರಾದ ಅಕ್ಷಯ್ ಕುಮಾರ್ ಅಜಮನಿ ಹಾಗೂ ಮಾದೇಶ ಚಲವಾದಿ ಮಂಗಳವಾರ ಕಾರ್ಯಕ್ರಮದ ಪೋಸ್ಟರ್‌ನ್ನು ಬಿಡುಗಡೆ…


